SSLC And PUC Exam Time Table – 2025 ನೇ ಸಾಲಿನ SSLC ಹಾಗೂ 2nd PUC ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಾತ್ಕಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಹಾಗೂ ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲು ತಾತ್ಕಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಜೊತೆಗೆ ಆಕ್ಷೇಪಣೆ ಸಲ್ಲಿಸಲು ಡಿ.16 ಅವಕಾಶ ಕಲ್ಪಿಸಲಾಗಿತ್ತು. ಇದೀಗ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಾಗಿದೆ.
SSLC And PUC Exam Time Table : SSLC ಪರೀಕ್ಷೆ -1 ವೇಳಾಪಟ್ಟಿ:
- ಮಾರ್ಚ್ 21- ಪ್ರಥಮ ಭಾಷೆ
- ಮಾರ್ಚ್ 24- ಗಣಿತ
- ಮಾರ್ಚ್ 26- ದ್ವಿತೀಯ ಭಾಷೆ
- ಮಾರ್ಚ್ 29- ಸಮಾಜ ವಿಜ್ಞಾನ
- ಏಪ್ರಿಲ್ 2- ವಿಜ್ಞಾನ
- ಏಪ್ರಿಲ್ 4- ತೃತೀಯ ಭಾಷೆ
SSLC And PUC Exam Time Table: ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ :
- ಮಾರ್ಚ್ 1- ಕನ್ನಡ, ಅರೇಬಿಕ್
- ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
- ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
- ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
- ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
- ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
- ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
- ಮಾರ್ಚ್ 13- ಅರ್ಥಶಾಸ್ತ್ರ.
- ಮಾರ್ಚ್ 15- ಇಂಗ್ಲಿಷ್.
- ಮಾರ್ಚ್ 17- ಭೂಗೋಳಶಾಸ್ತ್ರ.
- ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
- ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
- ಮಾರ್ಚ್ 20- ಹಿಂದಿ