SSLC Exam ಮಾರ್ಚ್‍ನಲ್ಲಿ ನಡೆಯಲಿರುವ SSLC ಪರೀಕ್ಷೆಯ ಫಲಿತಾಂಶ ಇಡೀ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸುವುದೇ ನಮ್ಮ ಮಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ. ವಿದ್ಯಾರ್ಥಿಗಳೂ ಸಹ ಪರೀಕ್ಷೆಯಲ್ಲಿ ಪಾಸ್ ಆಗಲೇಬೇಕು ಎನ್ನುವ ಛಲದಿಂದ ಓದಬೇಕೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕೀಯರ ಶಾಲಾ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ SSLC ಫಲಿತಾಂಶ ಸುಧಾರಣೆಗಾಗಿ ಕೈಗೊಂಡಿರುವ ಹೋಬಳಿ ಮಟ್ಟದ ಪ್ರೇರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಮೊದಲ ಬಾರಿಗೆ ಬದಲಾವಣೆಯಾಗುವ ಹಂತಾಗಿದ್ದು, ನಿಮ್ಮ ಗಮನ ಶಿಕ್ಷಣದ ಕಡೆ ಹೆಚ್ಚು ನೀಡುವ ನಿಟ್ಟಿನಲ್ಲಿ ಓದಬೇಕು. ಕಷ್ಟಪಟ್ಟು ಓದುವ ಬದಲಿಗೆ ಇಷ್ಠಪಟ್ಟು ಓದಬೇಕೆಂದರು. ನಾನು ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದವನು. 10ನೇ ತರಗತಿವರೆಗೂ ಕಾಲಿಗೆ ಚೆಪ್ಪಲಿ ಹಾಕಿಲ್ಲ ಅಂತಹ ಕಷ್ಟಗಳಿಂದ ಬೆಳದಿದ್ದೇನೆ ಆದರೆ ಇಂದಿನ ಪರಿಸ್ಥಿತಿಯೇ ಬೇರೆಯಾಗಿದೆ ಎಂದ ಅವರು ಬಡವರ ಶೈಕ್ಷಣಿಕ ಅಭಿವೃದ್ದಿಗಾಗಿ ಸರ್ಕಾರ ಅನೇಕ ಸೌಲತ್ತುಗಳನ್ನು ಕಲ್ಪಿಸಿದೆ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರದ್ದೆಯಿಂದ ಗುರಿ ಸಾಧಿಸುವ ನಿಟ್ಟಿನಲ್ಲಿ ಚೆನ್ನಾಗಿ ಓದಬೇಕು ಎಂದರು.
ಪರೀಕ್ಷೆ ಕೇವಲ ಎರಡೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಎರಡೂ ತಿಂಗಳು ಮೊಬೈಲ್ ಮತ್ತು ಟೀವಿ ಬದಿಗೊತ್ತಿ ಓದಿನ ಕಡೆ ಗಮನ ಕೊಡಬೇಕು, ಪೋಷಕರು ಸಹ ಟಿವಿ, ಮೊಬೈಲ್‍ಗೆ ಅಂಟಿಕೊಳ್ಳದೆ ತಮ್ಮ ಮಕ್ಕಳ ಶಿಕ್ಷಣ ಉಜ್ವಲ ಭವಿಷ್ಯಕ್ಕೆ ಸಹಕಾರ ನೀಡಬೇಕಾದ ಅಗತ್ಯವಿದೆ. ಮಕ್ಕಳ ಶೈಕ್ಷಣಿಕ ಅಭಿವೃದ್ದಿಯಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಪೋಷಕರ ಪಾತ್ರವೂ ಅಷ್ಟೇ ಮುಖ್ಯ ಎನ್ನುವುದನ್ನು ಪೋಷಕರು ಮರೆಯಬಾರದು ಎಂದ ಅವರು ಮಾರ್ಚ್‍ನಲ್ಲಿ ನಡೆಯಲಿರುವ 10 ನೇ ತರಗತಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ರ್ತೀಣರಾಗುವ ಮೂಲಕ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಬೇಕೆಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡಪ್ಪ, ತಹಶೀಲ್ದಾರ್ ಮನೀμï ಎನ್ ಪತ್ರಿ, ಬಿಇಒ ಎನ್.ವೆಂಕಟೇಶಪ್ಪ, ಕ್ಷೇತ್ರ ಸಮನ್ವಾಧಿಕಾರಿ ಆರ್.ವೆಂಕಟರಾಮಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಕೆಡಿಪಿ ಸದಸ್ಯರಾದ ಮಂಜುನಾಥರೆಡ್ಡಿ ಮತ್ತಿತರರು ಇದ್ದರು.