ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ 59.24 ರಷ್ಟು ಎಸ್.ಎಸ್.ಎಲ್.ಸಿ ಫಲಿತಾಂಶ

ಗುಡಿಬಂಡೆ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.59.24 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಳೆದ ವರ್ಷ ಶೇ.99.53 ರಷ್ಟು ಫಲಿತಾಂಶ ಪಡೆದುಕೊಂಡಿತ್ತು. ಈ ಬಾರಿ ಒಟ್ಟು 709 ಮಂದಿ ಪರೀಕ್ಷೆಯನ್ನು ಬರೆದಿದ್ದು, 420 ಮಂದಿ ಉತ್ತೀರ್ಣರಾಗಿದ್ದಾರೆ. ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪ 593 ಅಂಕಗಳನ್ನು ಪಡೆದುಕೊಂಡು ತಾಲೂಕಿನ ಟಾಪರ್‍ ಆಗಿದ್ದಾರೆ.

ತಾಲೂಕಿನ 12 ಸರ್ಕಾರಿ, 2 ವಸತಿ ಶಾಲೆ ಹಾಗೂ ಒಂದು ಅನುದಾನಿತ ಪ್ರೌಢಶಾಲೆ ಸೇರಿ ಒಟ್ಟು 15 ಶಾಲೆಗಳಿದ್ದು, ಒಟ್ಟು 709 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು. ಈ ಪೈಕಿ 420  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಲ್ಲೋಡು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು 56 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 20 ಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ತಾಲೂಕಿನಲ್ಲಿ ಕೊನೆಯ ಸ್ಥಾನ ಪಡೆದುಕೊಂಡ ಶಾಲೆಯಾಗಿದೆ.

SSLC TOPPERS 1

ಇನ್ನೂ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪ 593 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವರ್ಲಕೊಂಡ ಶಾಲೆಯ ವಿದ್ಯಾರ್ಥಿನಿ ಆರ್‍.ಲಕ್ಷ್ಮೀ 573 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮದ್ ಯೂನಸ್ ಖಾನ್ 571 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Next Post

ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ವರದಿ ಪ್ರಕಟ: ಹಿಂದೂ ಜನಸಂಖ್ಯೆ ಕುಸಿತಮ ಮುಸ್ಲಿಂ ಜನಸಂಖ್ಯೆ ಹೆಚ್ಚಳ?

Fri May 10 , 2024
ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿ ವರದಿಯಂತೆ ಭಾರತದಲ್ಲಿ 1950 ಮತ್ತು 2015ರ ನಡುವಿನ ಅವಧಿಯಲ್ಲಿ ಹಿಂದೂ ಜನಸಂಖ್ಯೆ ಶೇ.7.82 ಕಡಿಮೆಯಾಗಿದೆ. ಆದರೆ ಮುಸ್ಲಿಂರ ಸಂಖ್ಯೆ ಮಾತ್ರ ಶೇ.43.15 ಹೆಚ್ಚಾಗಿದೆ ಎಂಬ ವರದಿಯೊಂದರಲ್ಲಿ ತಿಳಿಸಿದೆ. ಕ್ರಾಸ್ ಕಂಟ್ರಿ ಅನಾಲಿಸಿಸ್ ಎಂಬ ಶೀರ್ಷಿಕೆಯ ಪತ್ರಿಕಾ ವರದಿಯಲ್ಲಿ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಮುಖ ಕಂಡಿದ್ದು, ಅಲ್ಪಸಂಖ್ಯಾತರ ಜನಸಂಖ್ಯೆಯಲ್ಲಿ ಏರಿಕೆ ಕಂಡಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ […]
muslim population raised
error: Content is protected !!