ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಪಟ್ಟಣದ ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳ ಆವರಣದಲ್ಲಿ ಬೀದಿ ನಾಯಿಗಳ (Street Dog) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನ (Street Dog)
ಈ ಕುರಿತು ಮಾಹಿತಿ ನೀಡಿದ ಅವರು, ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025 ರಲ್ಲಿ ನೀಡಿರುವ ನಿರ್ದೇಶನದಂತೆ, ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ, ಕೂಡಲೇ ಅದನ್ನು ಪರಿಶೀಲಿಸಿ, ಅವುಗಳ ಸಂಖ್ಯೆಯನ್ನು ಲೆಕ್ಕ ಹಾಕಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ತಿಳಿಸುವುದು.

ನೋಡಲ್ ಅಧಿಕಾರಿ ನೇಮಕ ಮಾಡಿ (Street Dog)
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು, ತಮ್ಮ ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ‘ನೋಡಲ್ ಅಧಿಕಾರಿಯನ್ನಾಗಿ‘ ನೇಮಕ ಮಾಡುವುದು ಹಾಗೂ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವುದು. ಹೆಚ್ಚಿನ ಮಾಹಿತಿಗಾಗಿ ಗುಡಿಬಂಡೆ ಪಟ್ಟಣ ಪಂಚಾಯತಿಯನ್ನು ಸಂಪರ್ಕಿಸಬಹುದೆಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
