Student – ಇನ್ನೇನು ಕೆಲವೇ ದಿನಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದೆ. ಈಗಾಗಲೇ ವಿದ್ಯಾರ್ಥಿಗಳು ಪಾಸ್ ಆಗುವ ನಿಟ್ಟಿನಲ್ಲಿ ಓದುತ್ತಿದ್ದಾರೆ. ಆದರೆ ಪರೀಕ್ಷೆಗೂ ಮುನ್ನವೇ ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತೊಂದು ಘಟನೆಯಲ್ಲಿ ತುಮಕೂರಿನ ಪಿಯುಸಿ (PUC) ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಮಹಡಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಹೇಳಲಾಗಿದೆ.

Student – ಪರೀಕ್ಷಾ ಭಯದಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸಾವು?
ಕಾರವಾರ (Karwar)ಮೂಲದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಗೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡದ್ದಾಳೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರ್ಧಿಯಲ್ಲಿರುವ ಬಾಲ ಮಂದರಿದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳಂತೆ. ಈ ಕಾರಣದಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಭಯದ ಹಿನ್ನೆಲೆಯಲ್ಲಿ ಬಾಲಮಂದರಿದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅನುಮಾನಿಸಲಾಗಿದೆ. ಈ ಸಂಬಂಧ ಕಾರವಾರದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student – ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಪಿಯುಸಿ (PUC) ವಿದ್ಯಾರ್ಥಿನಿ
ಇನ್ನೂ ತುಮಕೂರಿನಲ್ಲೂ (Tumkur) PUC ವಿದ್ಯಾರ್ಥಿನಿಯೊಬ್ಬಳು ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ದೀಪಿಕಾ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಸತಿ ಶಾಲೆಯ ಮಹಡಿಯ ಮೇಲೆ ಆಕೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮೂಲತಃ ಶಿರಾ ತಾಲೂಕಿನ ಕುಂಟೆಗೌಡನಪಾಳ್ಯದ ನಿವಾಸಿಯಾಗಿರುವ ದೀಪಿಕಾ ತುಮಕೂರಿನ ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಸಿದ್ದಾರ್ಥ ವಸತಿ ನಿಲಯದಲ್ಲಿ ವಾಸವಿದ್ದಳು. ಆದರೆ ಮಾ.6 ರಂದು ಏಕಾಏಕಿ ದೀಪಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಜಯನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.