ಬಾಗೇಪಲ್ಲಿ: ಹೊರಗುತ್ತಿಗೆ ನೌಕರರ ನಿಯಾಮಾನುಸಾರ ಖಾಯಂ ನೇಮಕಾತಿ ಮಾಡಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ನೇಮಕಾತಿಗೊಳಿಸಬೇಕು, 7ನೇ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಒಕ್ಕೂಟದ ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕುಟದ ತಾಲೂಕು ಘಟಕದ ಕಾರ್ಯದರ್ಶಿ ಸುಬ್ರಹ್ಮಣ್ಯಂ 2016 ರಲ್ಲಿ ಸುಪ್ರಿಂ ಕೋರ್ಟ್ ಆದೇಶವಿದ್ದರೂ ಗುತ್ತಿಗೆ, ದಿನಗೂಲಿ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವುದಲ್ಲದೆ ಹೊರಗುತ್ತಿಗೆ ಏಜೆನ್ಸಿಗಳು ಶೋಷಣೆ ನಡೆಸುತ್ತಿವೆ ಎಂದು ಆರೋಪಿಸಿದರು.
ದೇಶದಾದ್ಯಾಂತ ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿಗಳು ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಭತ್ತಿ ಮಾಡಿಲ್ಲ, ಅನುಕಂಪ ಆಧಾರಿತ ನೌಕರಿ ನೀಡಲು ಹಲವಾರು ನಿಬಂಧನೆಗಳನ್ನು ವಿಧಿಸಲಾಗುತ್ತಿದೆ ಎಂದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವಿರೋಧಿ ಅಂಶಗಳನ್ನು ನಿಯಮಗಳಿಂದ ಕೈಬಿಡಬೇಕೆಂದು ಒತ್ತಾಯಿಸಿದ ಅವರು ಶೇ.40 ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಪರಿಷ್ಕರಣೆ ತಕ್ದಣ ಜಾರಿಗೊಳಿಸಬೇಕು, ರಾಜ್ಯದ ಎಲ್ಲಾ ನೌಕರರಿಗೂ ಎನ್.ಪಿ.ಎಸ್ ಪದ್ದತಿ ರದ್ದುಗೊಳಿಸಿ ನಿಶ್ಚಿತ ಪಿಂಚಿಣಿ ಯೋಜನೆ ಮರುಸ್ಥಾಪನೆ ಮಾಡಬೇಕು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ನಂತರ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲೂಕು ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್ ರವರಿಗೆ ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲೂಕು ಘಟಕದ ಪದಾಧಿಕಾರಿಗಳಾದ ಅನಿಲ್, ಮುರಳಿ, ವೆಂಕಟೇಶ್, ಸುನಿತಾ, ನಾರಾಯಣಸ್ವಾಮಿ, ವಿನೋಧ್, ಶಿವಾನಂದ ಮತ್ತಿತರರು ಇದ್ದರು.