Taluk Level Sports – ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಕ್ರೀಢಾಸಕ್ತಿ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಗುಡಿಬಂಡೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಸಲಹೆ ನೀಡಿದರು.
ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕಾಲೇಜು ಕ್ರೀಡಾಕೂಟಕ್ಕೆ (Taluk Level Sports) ಚಾಲನೆ ನೀಡಿ ಮಾತನಾಡಿದ ಅವರು, ಯುವಕರೇ ಈ ದೇಶದ ಆಸ್ತಿ , ಯುವಕರು ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. (Taluk Level Sports) ಪಠ್ಯದ ಜತೆಗೆ ಕ್ರೀಡೆಗಳು ಕೂಡಾ ವ್ಯಕ್ತಿತ್ವ ಬೆಳವಣಿಗೆಗೆ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್, ಟಿವಿಗಳಿಗೆ ದಾಸರಾಗದೇ ಕ್ರೀಡಾಕೂಟಗಳಲ್ಲೂ ಸಹ ಭಾಗವಹಿಸಬೇಕೆಂದು ಸಲಹೆ ನೀಡಿದರು.
ಬಳಿಕ (Taluk Level Sports) ಕಾಲೇಜಿನ ಉಪನ್ಯಾಸಕ ಬಿ.ಜೆ.ರಾಮಣ್ಣ ಮಾತನಾಡಿ, ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸತತ ಪ್ರಯತ್ನದ ಮೂಲಕ ಯಶಸ್ಸು ಸಾಧ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಟೋಟಗಳಲ್ಲಿ ಭಾಗವಹಿಸಿ ಸಾಧಕರಾಗಬೇಕು. ಕ್ರೀಡಾಳುಗಳು ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳ ಧೈರ್ಯ, ಸಾಹಸಗಳ ಗುರುತಿಸುವಂತಹ ವೇದಿಕೆಯಾಗಿದೆ, ಈ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ (Taluk Level Sports) ವೇಳೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಆರ್.ಜಿ. ಸೋಮಶೇಖರ್, ದೈಹಿಕ ಶಿಕ್ಷಕರು, ಕ್ರೀಡಾಕೂಟದ ಆಯೋಜಕರಾದ ಭೌತಶಾಸ್ತ್ರ ಉಪನ್ಯಾಸಕ ಮೆಹಬೂಬ್ ಖಾನ್ ಹಾಜರಿದ್ದರು.