ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಂಘದ ವತಿಯಿಂದ 2024-25 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ (Teachers Sports) ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಕೂಟದಲ್ಲಿ ತಾಲ್ಲೂಕಿನ ಹಲವು ಶಾಲೆಗಳ ಶಿಕ್ಷಕರು ಭಾಗವಹಿಸಿ ಸಂಭ್ರಮಿಸಿದರು.
ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು (Teachers Sports)ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ ಪ್ರತಿದಿನ ಶಾಲೆಯಲ್ಲಿ ಮಕ್ಕಳ ಜೊತೆ ಪಾಠ ಪ್ರವಚನ, ಕಚೇರಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಲು ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದರು.
ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಮಾತನಾಡಿ, (Teachers Sports)ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗಾಗಿ ನಡೆಯುತ್ತಿರುವ ಕ್ರೀಡಾ ಚಟುವಟಿಕೆಗಳಲ್ಲಿ ಶಿಕ್ಷಕರು ಕ್ರಿಡಾ ಮನೋಭಾವದಿಂದ ಹೆಚ್ಚಿನ ಶಿಕ್ಷಕರು ಭಾಗವಹಿಸಿ ಕ್ರೀಡಾ ಮನೋಭಾವವನ್ನು ಮೆರೆಯ ಬೇಕೆಂದರು. ಕ್ರಿಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕವಾಗಿ ಆರೋಗ್ಯ ವಂತ ಜೀವನವಾಗುತ್ತದೆ ಈ ಮೂಲಕ ನಮ್ಮ ಚೈತನ್ಯವನ್ನು ಮತ್ತಷ್ಟು ವೃದ್ಧಿಯಾಗಲು ಸಹಕಾರಿಯಾಗುತ್ತದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ(Teachers Sports) ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮಾತನಾಡಿ ತಾಲೂಕಿನ ಶಿಕ್ಷಕರು ವರ್ಷ ಪೂರ್ತಿ ವಿದ್ಯಾರ್ಥಿಗಳ ನಾನಾ ಅಭಿವೃದ್ಧಿಗಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗಾಗಿ ಈ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು ಪ್ರತಿಯೊಬ್ಬ ಶಿಕ್ಷಕರು ಸಹ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ ಬಾರಿ ಶಿಕ್ಷಕರಿಗೆ ಆಯೋಜಿಸಿರುವ ಆಟೋಟಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಅತ್ಯಂತ ಪ್ರಮುಖ ಎಂದು ತಿಳಿಸಿದರು, ಈ ಮೂಲಕ ಶಿಕ್ಷಕರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತ ಶಿಕ್ಷಕರ ಸಾಮರ್ಥ್ಯವನ್ನು ಹೆಚ್ಚಿಸಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ಕ್ರೀಡಾಕೂಟದಲ್ಲಿ (Teachers Sports) ಎಲ್ಲರ ಗಮನವನ್ನು ಸೆಳೆದಿದ್ದು ಹಾಗೂ ಮನರಂಜಿಸಿದ್ದು ಹಗ್ಗಜಗ್ಗಾಟ ಹಲವು ಕ್ಲಸ್ಟರ್ ಗಳ ಶಿಕ್ಷಕರು ಒಂದೊAದು ತಂಡವನ್ನಾಗಿ ಮಾಡಿಕೊಂಡು ಮಹಿಳಾ ಮತ್ತು ಪುರುಷ ಶಿಕ್ಷಕರು ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಶಕ್ತಿಯನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾದರು, ಜತೆಗೆ ನೆರೆದಿದ್ದ ಎಲ್ಲಾ ಶಿಕ್ಷಕರಿಗೂ ಸಾರ್ವಜನಿಕಗೆ ಮನರಂಜನೆ ನೀಡಿದರು.
ಈ ವೇಳೆ (Teachers Sports) ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಕಾರ್ಯದರ್ಶಿ ಮುನಿಕೃಷ್ಣಪ್ಪ, ನೌಕರರ ಸಂಘದ ಕೃಷ್ಣಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀ ನರಸಿಂಹೇಗೌಡ, ಖಜಾಂಚಿ ರವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ಉಪಾಧ್ಯಕ್ಷ ಶ್ರೀರಾಮಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀರಾಮಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ. ರವೀಂದ್ರ, ತಿರುಮಣಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಕಾರ್ಯದರ್ಶಿ ರಾಮಕೃಷ್ಣ, ಟಿಪಿಒ ಮುರಳಿ, ದೈಹಿಕ ಶಿಕ್ಷಕ ಮನೋಹರ್, ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಸೇರಿದಂತೆ ನೂರಾರು ಶಿಕ್ಷಕರು ಹಾಜರಿದ್ದರು.