Kannada Ratha: ಕನ್ನಡ ರಥವನ್ನು ಅರ್ಥಪೂರ್ಣವಾಗಿ ಸ್ವಾಗತಿಸೋಣ: ತಹಸೀಲ್ದಾರ್ ಮನಿಷಾ

ಬಾಗೇಪಲ್ಲಿ: ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥ ಯಾತ್ರೆ (Kannada Ratha) ಬಾಗೇಪಲ್ಲಿ ತಾಲೂಕಿಗೆ ಜೂ. 27 ರಂದು ಆಗಮಿಸಲಿದ್ದು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡಪರ ಸಂಘ-ಸಂಸ್ಥೆಗಳ ಜೊತೆಯಲ್ಲಿ ಅರ್ಥಪೂರ್ಣವಾಗಿ ಸ್ವಾಗತಿಸಿ, ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಗುವುದು ಎಂದು ತಹಶಿಲ್ದಾರ್ ಮನೀಷಾ ಮಹೇಶ್ ಪತ್ರಿ ತಿಳಿಸಿದರು.

ಈ ಸಂಬಂಧ ತಹಶಿಲ್ದಾರ್ ಕಛೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬೆಳಿಗ್ಗೆ ಪಟ್ಟಣದ ಕೋರ್ಟ್ ಮುಂಭಾಗದಲ್ಲಿ ಸುವರ್ಣ ಸಂಭ್ರಮ ರಥಕ್ಕೆ ಪೂರ್ಣಕುಂಬ (Kannada Ratha) ಸ್ವಾಗತ ಕೋರಲಾಗುವುದು. ನಂತರ ವಿವಿಧ ಕಲಾ ತಂಡಗಳು ಹಾಗೂ ಸ್ತಬ್ಧ ಭಾವಚಿತ್ರ ಗಳ ಮೆರವಣಿಗೆ ಆರಂಭವಾಗಲಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕರ್ನಾಟಕ 50 ರ ಸಂಭ್ರಮದ ಜ್ಯೋತಿಯನ್ನು ಬರ (Kannada Ratha) ಮಾಡಿಕೊಂಡು ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಿರುವುದಾಗಿ. ಮೆರವಣಿಗೆ ಚಿತ್ರಾವತಿ ನದಿ ಸೇತುವೆಯಿಂದ ಆರಂಭವಾಗಿ ನ್ಯಾಷನಲ್ ಕಾಲೇಜು ಮುಂಭಾಗದವರೆಗೆ ನಡೆಯಲಿದೆ. (Kannada Ratha) ಭವ್ಯ ಮೆರವಣಿಗೆಯಲ್ಲಿ ತಾಲೂಕು ಆಡಳಿತದ ಎಲ್ಲಾ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ಶಾಲಾ ಕಾಲೇಜುಗಳ ಶಿಕ್ಷಕ,ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮಾತನಾಡಿ, ಗಡಿನಾಡಿಗೆ ಕರ್ನಾಟಕ ಸಂಭ್ರಮ ರಥ (Kannada Ratha) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಡು-ನುಡಿ, ಸಂಸ್ಕೃತಿ,ಸಾಹಿತ್ಯದ ಬಗ್ಗೆ ಯುವ ಜನತೆಯಲ್ಲಿ ಅರಿವು ಮೂಡಿಸುವ, ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ  ಸಲುವಾಗಿ ಅರ್ಥಪೂರ್ಣ ಮೆರವಣಿಗೆಯನ್ನು ನಡೆಸಬೇಕಾಗುತ್ತದೆ. ಮೆರವಣಿಗೆಯಲ್ಲಿ ಭಾಗವಹಿಸುವ (Kannada Ratha) ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಬಾವುಟಗಳು,ಶಲ್ಯಗಳನ್ನು ಧರಿಸಬೇಕು ಅಲ್ಲದೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ  ಶಿಕ್ಷಣ ಇಲಾಖೆಯ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ (Kannada Ratha) ಶಿಕ್ಷಣ ಇಲಾಖೆ ಶಿಕ್ಷಣ ಸಂಯೋಜಕ ಆರ್.ವೆಂಕಟರಾವಪ್ಪ, ರೇಷ್ಮೆ ಸಹಾಯಕ ನಿರ್ದೇಶಕ ಡಾ. ಚಿನ್ನ ಕೈವಾರಮಯ್ಯ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಪುರಸಭೆ ಮಾಜಿ ಸದಸ್ಯ ಮಹಮದ್ ಎಸ್ ನೂರುಲ್ಲಾ , ಪತ್ರಕರ್ತ ಗೋಪಾಲರೆಡ್ಡಿ  ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Leave a Comment

Your email address will not be published. Required fields are marked *

Scroll to Top