ರಾಜ್ಯ ಸರ್ಕಾರಿ ನೌಕರರು 7th Pay Commission ಗಾಗಿ ಎದುರು ನೋಡುತ್ತಿದ್ದಾರೆ. ಸುಮಾರು ದಿನಗಳಿಂದಲೂ 7ನೇ ವೇತನ ಆಯೋಗ ಜಾರಿಗೆ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ಶೀಘ್ರವೇ 7ನೇ ವೇತನ ಆಯೋಗದ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ನೌಕರರ ನಿರೀಕ್ಷೆಯಂತೆ ಶೇ.27% ವೇತನ ಹೆಚ್ಚಳಕ್ಕೆ ಒಲವು ತೋರಿದೆ ಎಂದು ತಿಳಿದು ಬಂದಿದೆ. ವೇತನದ ಹೆಚ್ಚಳದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದ್ದು, ಈ ಕುರಿತು ತೀರ್ಮಾನ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಅಧಿಕಾರ ನೀಡಿದೆ ಎಂದು ಹೇಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಲೋಕಸಭಾ ಚುನಾವಣೆಗೂ ಮುನ್ನಾ 7ನೇ ವೇತನ ಆಯೋಗ ವರದಿ ಜಾರಿ ಮಾಡಲು ಸರ್ಕಾರದ ಮೇಲೆ ಒತ್ತಡ ತಂದಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಕಾರಣದಿಂದ ಜೂನ್ ಅಂತ್ಯದೊಳಗೆ ಜಾರಿ ಮಾಡಲು ಸಂಘ ಗಡುವು ನೀಡಿತ್ತು. ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಿದೆ ಎಂಬ ಸುದ್ದಿ ಕೇಳಿಬಂದಿದೆ. ರಾಜ್ಯ ಸರ್ಕಾರದ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಿದ್ದ 7ನೇ ವೇತನ ಆಯೋಗ ನೌಕರರ ವೇತನವನ್ನು ಶೇ.27 ರಷ್ಟು ಹೆಚ್ಚಳ ಮಾಡಲು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನು ಶಿಫಾರಸ್ಸು ಮಾಡಿತ್ತು. ಇದೀಗ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡುವ ಕುರಿತು ಗುಡ್ ನ್ಯೂಸ್ ನೀಡಲಿದೆ ಎಂದು ಹೇಳಲಾಗಿದೆ.
ಇನ್ನೂ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನು ಶಿಫಾರಸ್ಸು ಮಾಡಿತ್ತು. ಈ ವರದಿಯಲ್ಲಿ ಆರಂಭಿಕ ನೌಕರರ ಕನಿಷ್ಟ 17 ಸಾವಿರಯಿದ್ದು, ಅದನ್ನು 27 ಸಾವಿರಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ವೇತನ ಕನಿಷ್ಟ 1,04,600 ಯಿದ್ದು, ಅದನ್ನು 1,67,200ಕ್ಕೆ ಪರಿಷ್ಕರಿಸುವಂತೆ ಆಯೋಗ ಶಿಫಾರಸ್ಸಯ ಮಾಡಿತ್ತು. ಇದು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯವಾಗಲಿದೆ. ಜೊತೆಗೆ ಕೆಲವೊಂದು ಭತ್ಯೆಗಳ ಹೆಚ್ಚಳಕ್ಕೂ ಶಿಫಾರಸ್ಸು ಮಾಡಲಾಗಿದ್ದು, ಈ ವರದಿ ಅನುಷ್ಠನಕ್ಕಾಗಿ ರಾಜ್ಯ ಸರ್ಕಾರಿ ನೌಕರರು ಕಾತುರದಿಂದ ಕಾಯುತ್ತಿದ್ದಾರೆ.