ಕಳೆದೆರಡು ದಿನಗಳ ಹಿಂದೆಯಷ್ಟೆ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ಡಿ.ಕೆ.ಶಿವಕುಮಾರ್ ರವರನ್ನು ಮುಖ್ಯಮಂತ್ರಿ ಮಾಡಬೇಕು, ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದು, ಈ ಹೇಳಿಕೆ ಇದೀಗ ರಾಜ್ಯದಲ್ಲಿ ಸಿಎಂ, ಡಿಸಿಎಂ ಹುದ್ದೆಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ದಲಿತ ಸಿಎಂ, ಲಿಂಗಾಯಿತ ಸಿಎಂ ಎಂಬ ಕೂಗು ಸಹ ಕೇಳಿಬರುತ್ತಿದೆ. ಈ ಹೇಳಿಕೆಯ ವಿರುದ್ದ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಸಿದ್ದು ಬಣ ಹಾಗೂ ಡಿಕೆಶಿ ಬಣ ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಡಿಸಿಎಂ ಸೃಷ್ಟಿಯ ಬಗ್ಗೆ ಕದನ ನಡೆಯುತ್ತಿತ್ತು. ಇದೀಗ ಮುಖ್ಯಮಂತ್ರಿಯನ್ನು ಬದಲಿಸುವ ಕುರಿತಂತೆ ಜೋರು ಚರ್ಚೆ ನಡೆಯುತ್ತಿದೆ. ಈ ನಡುವೆ ಕೆಂಪೇಗೌಡ ಜಯಂತಿಯಲ್ಲಿ ಚಂದ್ರಶೇಖರನಾಥ ಸ್ವಾಮೀಜಿಗಳು ಸಿಎಂ ಸ್ಥಾನ ಬಿಟ್ಟುಕೊಡುವಂತೆ ನೀಡಿದ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೆ ತೀವ್ರ ಮುಜುಗರ ತಂದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ತಮ್ಮ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರಂತೆ. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಟಿ ನಡೆಸುವ ಸಮಯದಲ್ಲಿ ರಾಜಕೀಯದಲ್ಲಿ ಸ್ವಾಮೀಜಿಗಳ ಹಸ್ತಕ್ಷೇಪ ನಡೆಯುತ್ತಿದ್ದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ಸಹ ನೀಡದೇ ಲಿಫ್ಟ್ ಒಳಗೆ ಹೋದರು.
ಈ ಸಮಯದಲ್ಲಿ ಸಿಎಂ ಸಿದ್ದರಾಮಯ್ಯನವರ ಆಪ್ತರಾದ ಕೆ.ಜೆ.ಜಾರ್ಜ್, ಪರಮೇಶ್ವರ್ ಜೊತೆಗೆ ಲಿಫ್ಟ್ ನಲ್ಲಿ ಹೋಗುವಾಗ ಯಾರೋ ಹೇಳಿಕೊಟ್ಟು ಮಾಡಿಸಿದ್ದಾರೆ ಎಎಂದು ಹೇಳಿದ್ದಾರೆ. ಇದಕ್ಕೆ ಪರಮೇಶ್ವರ್ ಸಹ ಹೌದು ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಡಿಕೆಶಿಗೆ ಅಧಿಕಾರ ಬಿಟ್ಟುಕೊಡುವಂತೆ ಸ್ವಾಮೀಜಿ ತುಂಬು ಮನಸ್ಸಿನಿಂದ ಹೇಳಿದ್ದಾರೆಯೇ ಅಥವಾ ಯಾರಾದರೂ ಹೇಳಿದ್ದಕ್ಕೆ ಆ ರೀತಿ ಹೇಳಿದ್ದಾರೆಯೇ ಎಂಬ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಈ ಕುರಿತು ಸಿದ್ದರಾಮಯ್ಯ ಮಾತನಾಡಿದ್ದು, ರಾಜಕಾರಣಕ್ಕೂ ಸ್ವಾಮೀಜಿಗಳು ಯಾವುದೇ ಸಂಬಂಧವಿಲ್ಲ. ಸಿಎಂ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುವುದು ನಮ್ಮ ಶಾಸಕರು ಹಾಗೂ ಹೈಕಮಾಂಡ್ ಎಂದು ಹೇಳಿದ್ದರು. ಸದ್ಯ ಕರ್ನಾಟಕದಲ್ಲಿ ಸಿಎಂ ಹಾಗೂ ಡಿಸಿಎಂ ಹುದ್ದೆಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಇದು ಎಲ್ಲಿಯವರೆಗೆ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.