Friday, January 23, 2026
HomeStateTraffic Rules : ಸಂಚಾರಿ ನಿಯಮಗಳ ಬಗ್ಗೆ ಜಾಗೃತರಾಗಿ, ಇತರರನ್ನೂ ಜಾಗೃತರನ್ನಾಗಿ ಮಾಡಿ : ತಾಪಂ...

Traffic Rules : ಸಂಚಾರಿ ನಿಯಮಗಳ ಬಗ್ಗೆ ಜಾಗೃತರಾಗಿ, ಇತರರನ್ನೂ ಜಾಗೃತರನ್ನಾಗಿ ಮಾಡಿ : ತಾಪಂ ಇಒ ನಾಗಮಣಿ

ಇಂದಿನ ವೇಗದ ಜಗತ್ತಿನಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆಯಲ್ಲಿ ಸಂಚರಿಸುವಾಗ ನಾವು ಮಾಡುವ ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬಹುದು. ಈ ಹಿನ್ನೆಲೆಯಲ್ಲಿ, “ಸಂಚಾರ ನಿಯಮಗಳ (Traffic Rules) ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಮತ್ತು ಇತರರಿಗೂ ಅರಿವು ಮೂಡಿಸಬೇಕು” ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (EO) ನಾಗಮಣಿ ಅವರು ಕರೆ ನೀಡಿದ್ದಾರೆ.

Students and officials participate in a road safety and traffic rules awareness rally in Gudibande, Chikkaballapur

Traffic Rules – ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ  ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ, ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಜನವರಿ 2026 ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪಘಾತ ಮುಕ್ತ ಸಮಾಜಕ್ಕೆ ನಿಯಮ ಪಾಲನೆ ಅನಿವಾರ್ಯ

ವಾಹನ ಚಲಾಯಿಸುವ ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು (Traffic Rules) ಪಾಲಿಸಿದಾಗ ಅಪಘಾತಗಳನ್ನು ಕಡಿಮೆ ಮಾಡಬಹುದು. ಸಂಚಾರಿ ನಿಯಮಗಳ ಬಗ್ಗೆ ಮಕ್ಕಳು ಜಾಗೃತರಾಗಬೇಕು, ಜೊತೆಗೆ ತಮ್ಮ ಮನೆಯವರಿಗೆ ತಿಳಿಸಬೇಕು. ಇನ್ನೂ ಇತ್ತೀಚಿಗೆ ಸೈಬರ್‍ ಅಪರಾಧಗಳು ಹೆಚ್ಚಾಗುತ್ತಿದ್ದು, ತಾವು ಸೈಬರ್‍ ವಂಚನೆಗೆ ಸಿಲುಕಿದರೇ ಕೂಡಲೇ ಸಹಾಯವಾಣಿಯನ್ನು ಸಂಪರ್ಕಿಸಬೇಕು. ಜೊತೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನೂ ಸಹ ತಡೆಯಲು ಮುಂದಾಗಬೇಕು ಎಂದರು.

Students and officials participate in a road safety and traffic rules awareness rally in Gudibande, Chikkaballapur

ಹೆಚ್ಚುತ್ತಿರುವ ಅಪಘಾತಗಳು: ಒಂದು ಎಚ್ಚರಿಕೆ ಘಂಟೆ!

ಬಳಿಕ ಮುಖ್ಯ ಅತಿಥಿಯಾಗಿ ಮಾತನಾಡಿದ ಡಿಡಿಪಿಐ ರಮೇಶ್, ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಕಳೆದ ವರ್ಷ 750 ರಸ್ತೆ ಅಪಘಾತಗಳು ದಾಖಲಾಗಿದ್ದರೆ, ಈ ವರ್ಷ 955 ಅಪಘಾತಗಳು ಸಂಭವಿಸಿರುವುದು ಎಲ್ಲರಿಗೂ ಎಚ್ಚರಿಕೆ ಘಂಟೆಯಾಗಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಕುರಿತು (Traffic Rules)ನಿರಂತರವಾಗಿ ತಿಳಿಸಬೇಕು. ವಿದ್ಯಾರ್ಥಿಗಳು ಕೂಡ ತಾವು ಕಲಿತ ಮಾಹಿತಿಯನ್ನು ತಮ್ಮ ಕುಟುಂಬದ ಸದಸ್ಯರಿಗೆ, ಪೋಷಕರಿಗೆ ತಿಳಿಸುವ ಮೂಲಕ ಸಮಾಜದಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

Read this also : ನಿಮಗೆ ಸಲಾಂ ಮೇಡಂ! ಲೇಡಿ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ….!

ಅರಿವು ಮೂಡಿಸಲು ಜಾಗೃತಿ ಜಾಥಾ

ಕಾರ್ಯಕ್ರಮದ (Traffic Rules) ಅಂಗವಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಪಟ್ಟಣದ ರಾಜಬೀದಿಗಳಲ್ಲಿ ಬ್ಯಾಂಡ್‌ಸೆಟ್ ಹಾಗೂ ಘೋಷಣೆಗಳೊಂದಿಗೆ ಜಾಗೃತಿ ಜಾಥಾ ನಡೆಸಿದರು. ಮೆರವಣಿಗೆಯ ಉದ್ದಕ್ಕೂ ರಸ್ತೆ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಪಾದಚಾರಿಗಳು ಮತ್ತು ವಾಹನ ಚಾಲಕರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂಬ ಸಂದೇಶವಿರುವ ಫಲಕಗಳನ್ನು ಹಿಡಿದು ಮಕ್ಕಳು ಗಮನ ಸೆಳೆದರು. ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥರೆಡ್ಡಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್‍ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ  ಕೃಷ್ಣಕುಮಾರಿ, ಪಪಂ ಮುಖ್ಯಾಧಿಕಾರಿ ಆರತಿ, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ದೈಹಿಕ ಶಿಕ್ಷಕರು, ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ಹಲವರು ಹಾಜರಿದ್ದರು.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular