DYSP : ಗೃಹ ಸಚಿವ ಡಾ.ಪರಮೇಶ್ವರ್ ರವರ ತವರು ಜಿಲ್ಲೆ ತುಮಕೂರಿನಲ್ಲಿ ದೂರು ನೀಡಲು ಹೋದ ಮಹಿಳೆಯೊಂದಿಗೆ ಪೊಲೀಸಪ್ಪ ರಾಸಲೀಲೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋ ಒಂದು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಇಡೀ ಪೊಲೀಸ್ ರನ್ನು ತಲೆತಗ್ಗಿಸುವಂತೆ ಮಾಡಿದೆ ಎನ್ನಲಾಗುತ್ತಿದೆ.
ನ್ಯಾಯ ಕೊಡಿಸಬೇಕಾದ ಪೊಲೀಸರೇ ಸ್ತ್ರೀ ಭಕ್ಷಕರಾಗಿದ್ದಾರೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರ, ಮಕ್ಕಳ ರಕ್ಷಣೆ ಮಾಡುವ ಪ್ರತಿಜ್ಞೆಯನ್ನು ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರ ತವರು ಜಿಲ್ಲೆಯಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ DYSP ಕಚೇರಿಯಲ್ಲಿ ಈ ಅಸಹ್ಯಕಾರಿ ಘಟನೆ ನಡೆದಿದ್ದು ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನೂ ಪಾವಗಡ ಮೂಲದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಮಾತುಕತೆ ನಡೆಸಲು ಹಾಗೂ ಕೆಲವೊಂದು ವಿಚಾರಗಳ ಕುರಿತು ವಿಚಾರಣೆ ನಡೆಸಬೇಕು ಅಂತಾ ಮಹಿಳೆಯನ್ನು DYSP ಕಚೇರಿಗೆ ಕರೆಸಲಾಗಿತ್ತು. ಈ ವೇಳೆ DYSP ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕೆಂಬ ದೃಷ್ಟಿಯಿಂದ ಮಹಿಳೆ ಒಪ್ಪಿಕೊಂಡಿರಬಹುದು ಎನ್ನಲಾಗಿದೆ.
ನಂತರ DYSP ಮಹಿಳೆಯನ್ನು ಕಚೇರಿಯಲ್ಲಿದ್ದ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ಆರಂಭಿಸಿದ್ದಾನೆ. ಈ ವೇಳೆ ಶೌಚಾಲಯದ ಕಿಟಕಿಯಿಂದ ಯಾರೋ ಈ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿರುವುದು ಕಾಣುತ್ತದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ.