Union Budget 2024: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಬಜೆಟ್ ನಲ್ಲಿ ವಿಶೇಷ ಪ್ರಾಧಾನ್ಯತೆ, ಸಂಸದ ಸುಧಾಕರ್ ರವರಿಗೆ ಅಭಿನಂದನೆ ಸಲ್ಲಿಸಿದ ಮಿಥುನ್ ರೆಡ್ಡಿ….!

Union Budget 2024: ಕೇಂದ್ರ ಬಜೆಟ್ 2024 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಆರ್ಥಿಕ, ಸಾಮಾಜಿಕ ಸುಧಾರಣೆಗೆ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್ ಅವರಿಗೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ನಾಯಕರಾದ ಆರ್.ಮಿಥುನ್ ರೆಡ್ಡಿ ವಿಶೇಷ ಅಭಿನಂದನೆಗಳನ್ನು ತಿಳಿಸಿದರು.

ಕೇಂದ್ರ ಬಜೆಟ್ 2024 ರ ಕುರಿತು ಮಾದ್ಯಮ ಹೇಳಿಕೆ ನೀಡಿದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಆರ್‍.ಮಿಥುನ್ ರೆಡ್ಡಿ ಈ ಬಜೆಟ್‌ (Union Budget 2024) ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ.  ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌ ಆಗಿದೆ. ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಸಾಕಷ್ಟು ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ (Union Budget 2024) ನಿತಿನ್‌ ಗಡ್ಕರಿ ಅವರಿಗೆ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್ ಅವರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್‌ನಲ್ಲಿ ತಂದಿರುವುದಕ್ಕೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

Mithun Reddy praised Dr K Sudhakar 0

ಇನ್ನೂ ಸತತ 7ನೇ ಬಜೆಟ್ (Union Budget 2024) ಮಂಡಿಸಿದ ವಿತ್ತ ಸಚಿವರಾದ ನಿರ್ಮಲ ಸೀತಾರಾಮನ್  ರವರಿಗೆ ಅಭಿನಂದನೆ ತಿಳಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ 1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ ನಲ್ಲಿದೆ. (Union Budget 2024) ಕೃಷಿಗೆ ಆದ್ಯತೆ, ಸಾಮಾಜಿಕ ನ್ಯಾಯ ಉತ್ಪಾದನೆ ಹಾಗೂ ಸೇವಾ ಕ್ಷೇತ್ರ, ನಗರಾಭಿವೃದ್ಧಿ, ಸಂಶೋಧನೆ, ಭವಿಷ್ಯದ ಸುಧಾರಣೆಗಳು, ಕೈಗಾರಿಕೆಗಳು ಸೇರಿದಂತೆ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಲಿದೆ ಎಂದು ಆರ್.ಮಿಥುನ್ ರೆಡ್ಡಿ ಅವರು ತಿಳಿಸಿದರು.

Leave a Reply

Your email address will not be published. Required fields are marked *

Next Post

Pradeep Eshwar: ಸಿಎಂ ಸಾಹೇಬರ ಒಂದು ಕೂದಲು ಕಿತ್ತುಕೊಳ್ಳೋಕೆ ಆಗೊಲ್ಲ ಎಂದು ಸವಾಲಾಕಿದ ಶಾಸಕ ಪ್ರದೀಪ್….!

Tue Jul 23 , 2024
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಸಿಲುಕಿಸಲು ಇಡಿ ಹಾಗೂ ಕೇಂದ್ರ ಬಿಜೆಪಿ ನಾಯಕರು ಒತ್ತಡ ಹಾಕುತ್ತಿದ್ದಾರೆ, ಆದರೆ ಸಿಎಂ ಸಿದ್ದರಾಮಯ್ಯನವರ ಒಂದು ಕೂದಲು ಸಹ ಟಚ್ ಮಾಡೋಕೆ ನಿಮ್ಮ ಕೈಯಲ್ಲಾಗಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‍ (Pradeep Eshwar) ಕೇಂದ್ರ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್‍ (Pradeep […]
Pradeep Eshwar comments about ED
error: Content is protected !!