Rahul Gandhi – ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯವರಿಗೆ ಉತ್ತರ ಪ್ರದೇಶದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಕಳೆದ ಲೋಕಸಭಾ ಚುನಾವಣೆ ಪ್ರಚಾರದ ಸಮಯದಲ್ಲಿ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ (Rahul Gandhi) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಜ.7 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಅಖಿಲ ಭಾರತ ಹಿಂದೂ ಮಹಾ ಸಂಘದ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಧೀರ್ ಕುಮಾರ್ ರವರು ಸಮನ್ಸ್ ಜಾರಿ ಮಾಡಿದ್ದಾರೆ. (Rahul Gandhi)ಪಂಕಜ್ ಪಾಠಕ್ ಪರ ವಾದಿಸಿದ ವಕೀಲ ವೀರೇಂದ್ರ ಪಾಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಬಡ ವರ್ಗಗಗಳ ಜನರನ್ನು ಪ್ರಚೋದಿಸಲು ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ತನ್ನ ವೈಯುಕ್ತಿಕ ಹಿತಾಸಕ್ತಿಗಾಗಿ ಉದ್ದೇಶ ಪೂರ್ವಕವಾಗಿ (Rahul Gandhi) ಆರ್ಥಿಕವಾಗಿ ದುರ್ಬಲ ವರ್ಗಗಳ ನಡುವೆ ಹಗೆತನ ಹಾಗೂ ದ್ವೇಷವನ್ನು ಬಿತ್ತಲು ಕಾಂಗ್ರೇಸ್ ಪ್ರಯತ್ನ ಮಾಡಿದೆ ಎಂದು ಪಂಕಜ್ ಪಾಠಕ್ ಆರೋಪಿಸಿದ್ದಾರೆ.
ಇನ್ನೂ ಅಂದು ರಾಹುಲ್ ಗಾಂಧಿ (Rahul Gandhi)ಹೇಳಿದ್ದೇನು ಎಂಬ ವಿಚಾರಕ್ಕೆ ಬಂದರೇ, ಬಡವರ ಮತ ಪ್ರಮಾಣ ಹೆಚ್ಚಿದರೂ ಸಹ ಅವರು ಹೊಂದಿರುವ ಆಸ್ತಿಯ ಶೇಕಡಾವಾರು ಪ್ರಮಾಣ ತೀರಾ ಕಡಿಮೆಯಾಗಿದೆ. ಇದೇ ಪರಿಸ್ಥಿತಿ ಮುಂದುವರೆದರೇ ಹೆಚ್ಚಿನ ಜನಸಂಖ್ಯೆ ಇರುವವರು ಹೆಚ್ಚಿನ ಆಸ್ತಿಗೆ ಬೇಡಿಕೆ ಸಲ್ಲಿಸಬಹುದು. ಎಸ್.ಸಿ ಗಳು, ಎಸ್.ಟಿ. ಗಳು, (Rahul Gandhi)ಅಲ್ಪಸಂಖ್ಯಾತರು ಹಾಗೂ ಇತರೆ ಸಮುದಾಯಗಳು ಜನಸಂಖ್ಯೆ ಮತ್ತು ಸ್ಥಿತಿಯನ್ನು ನಿಖರವಾಗಿ ನಿರ್ಣಯಿಸಲು ಜಾತಿ ಗಣತಿ ನಡೆಸಬೇಕು ಎಂದು ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಯ (Rahul Gandhi) ಕಾರಣದಿಂದ ಅವರು ವಿಚಾರಣೆಗೆ ಹಾಜರಾಗಬೇಕಿದೆ.