ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ಎಸ್.ಐ.ಟಿ ಆ.5 ರಂದು 3072 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. 12 ಆರೋಪಿಗಳ ವಿರುದ್ದ ಮೂರು ಸಾವಿರ ಪುಟಗಳ ಚಾರ್ಜ್‌ಶೀಟ್ ಅನ್ನು (Valmiki Corporation scam) ಬೆಂಗಳೂರಿನ 1ನೇ ಎ.ಸಿ.ಎಂ.ಎಂ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ ಸಲ್ಲಿಸಿದೆ. ಆದರೆ ಈ ಚಾರ್ಜ್ ಶೀಟ್ ನಲ್ಲಿ ಇಡಿ ಬಂಧನಕ್ಕೆ ಒಳಗಾದ ಶಾಸಕ ನಾಗೇಂದ್ರ ಹಾಗೂ ಮತ್ತೋರ್ವ ಶಾಸಕ ಬಸನಗೌಡ ದದ್ದಲ್ ಹೆಸರು ಉಲ್ಲೇಖವಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ (Valmiki Corporation scam) ಎಂದು ಹೇಳಲಾಗುತ್ತಿದೆ.
ಕರ್ನಾಟಕ ರಾಜ್ಯ ವಾಲ್ಮೀಕಿ ನಿಗಮ (Valmiki Corporation scam) ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಎಸ್.ಐ.ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಪ್ರಥಮ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಈ ಚಾರ್ಜ್ ಶೀಟ್ ಒಟ್ಟು ಮೂರು ಸಾವಿರ ಪುಟಗಳನ್ನು ಒಳಗೊಂಡಿದೆ. ಹಣ, ಚಿನ್ನ, ಕಾರು ಸೇರಿದಂತೆ 50 ಕೋಟಿ ಜಪ್ತಿ ಮಾಡಿದ್ದಾಗಿ ಎಸ್.ಐ.ಟಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ ಎಂದು ತಿಳಿದುಬಂದಿದೆ. ನಗದು- 16.83 ಕೋಟಿ ರೂಪಾಯಿ ಹಣ, 11 ಕೋಟಿ 70 ಲಕ್ಷ ಮೌಲ್ಯದ 16.252 ಕೆ.ಜಿ ಚಿನ್ನ, 4.51 ಕೋಟಿ ಮೌಲ್ಯದ ಲ್ಯಾಂಬರ್ಗಿನಿ ಉರುಸ್ ಹಾಗೈ, ಮರ್ಸಿಡೀಸ್ ಬೆಂಜ್ ಕಾರು, ತನಿಖಾಧಿಕಾರಿ ಬ್ಯಾಂಕ್ ಖಾತೆಯಿಂದ 3.19 ಕೋಟಿ ರೂ. ಹಣ, 13.72 ಕೋಟಿ ರೂ. ಹಣ ಫ್ರೀಜ್ ಸೇರಿದಂತೆ ಒಟ್ಟು ಒಟ್ಟು 49.96 ಕೋಟಿ ವಶಪಡಿಸಿಕೊಂಡ (Valmiki Corporation scam) ವಸ್ತುಗಳ ಬಗ್ಗೆ ಎಸ್.ಐ.ಟಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಹೇಳಲಾಗಿದೆ.
ಇನ್ನೂ ವಾಲ್ಮೀಕಿ ನಿಗಮ (Valmiki Corporation scam) ಪ್ರಕರಣದಲ್ಲಿ ಮೊದಲು ಬಂಧನ ಆಗಿರುವಂತ ಆರೋಪಿಗಳ ವಿರುದ್ದ ಮಾತ್ರ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಪದ್ಮನಾಭ, ಪರಶುರಾಮ್, ಸತ್ಯನಾರಾಯಣ, ನೆಕ್ಕುಂಟಿ ನಾಗರಾಜ್, ಸತ್ಯನಾರಾಯಣ ಇಟ್ಕಾರಿ ತೇಜಾ, ನಾಗೇಶ್ವರ, ಸಾಯಿ ಸೇರಿದಂತೆ 12 ಮಂದಿ ಆರೋಪಿಗಳ ಹೆಸರುಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಪ್ರಕರಣದಡಿ (Valmiki Corporation scam) ಇಡಿ ಬಂಧಸಿರುವ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ರವರುಗಳ ಹೆಸರುಗಳು ಇಲ್ಲದೇ ಇರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.