ಹರಿಯಾಣ ಚುನಾವಣೆಯ ಜೂಲಾನಾ ಎಂಬ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ (Vinesh Phogat) ಮೊದಲ ಗೆಲುವು ಸಾಧಿಸಿದ್ದಾರೆ. 5 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇತ್ತೀಚಿಗಷ್ಟೆ ಒಲಂಪಿಕ್ಸ್ ನಲ್ಲಿ ಅನರ್ಹಗೊಳ್ಳುವ ಮೂಲಕ ಸೋಲನ್ನು ಅನುಭವಿಸಿದ್ದರು. ಸೆ.4 ರಂದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ವಿನೇಶ್ ಪೋಗಟ್ (Vinesh Phogat) ಮೊದಲ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸತ್ಯಕ್ಕೆ ಜಯವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಜೂಲಾನಾ ಕ್ಷೇತ್ರದಿಂದ ಗೆಲವು ಸಾಧಿಸಿದ ಕುಸ್ತಿಪಟು ವಿನೇಶ್ ಪೋಗಟ್ (Vinesh Phogat) ಮಾತನಾಡಿ, ನಾನು ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದೇನೆ. ನಾನು ನನ್ನ ಕ್ರೀಡಾ ಜೀವನದಲ್ಲಿ ಅನುಭವಿಸಿದ ನೋವನ್ನು ಬೇರೆ ಕ್ರೀಡಾಪಟುಗಳು ಅನುಭವಿಸುವುದು ಬೇಡ ಎಂದು ಬಯಸುತ್ತೇನೆ. ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೇಸ್ ಪಕ್ಷಕ್ಕೆ ನನ್ನ (Vinesh Phogat) ಧನ್ಯವಾದ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ (Vinesh Phogat) ಮಾತ್ರ ನಮ್ಮ ಜೊತೆ ಯಾರು ನಿಲ್ಲುತ್ತಾರೆ ಎಂಬುದು ಗೊತ್ತಾಗುತ್ತದೆ. ಬಿಜೆಪಿ ಪಕ್ಷ ಬಿಟ್ಟು ಎಲ್ಲಾ ಪಕ್ಷಗಳು ನನ್ನ ನೋವು ಹಾಗೂ ನನ್ನ ಕಣ್ಣೀರನ್ನು ಅರ್ಥ ಮಾಡಿಕೊಂಡಿದ್ದವು ಎಂದರು.
ಇನ್ನೂ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಕಾಂಗ್ರೇಸ್ 37 ಸ್ಥಾನಗಳನ್ನು ಪಡೆದುಕೊಂಡಿತ್ತು. ಆದರೂ ವಿನೇಶ್ ಪೋಗಟ್ (Vinesh Phogat) ಜೂಲಾನಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ (Vinesh Phogat) ಮಧ್ಯೆ ನೇರಾನೇರ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ (Vinesh Phogat) ಎಣಿಕೆಯಲ್ಲಿ ಹೆಚ್ಚು ಮತಗಳನ್ನು ಪಡೆದುಕೊಂಡ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ಸದ್ಯ ಹರಿಯಾಣ ಬಿಜೆಪಿಯು ಮೂರನೇ ಅವಧಿಗೆ ಅಧಿಕಾರ ಪಡೆಯಲಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಈ ಚುನಾವಣೆಯ ಎಕ್ಸಿಟ್ ಪೋನ್ ಫಲಿತಾಂಶ ಪೂರಾ ಬದಲಾಗಿದೆ ಎನ್ನಲಾಗಿದೆ.