Viral News – ತಮಗಿಂತ ಹಿರಿಯನ್ನು ಪ್ರೀತಿಸಿ ಮದುವೆಯಾಗುವಂತಹ ಘಟನೆಗಳು ಕೇಳಿಬರುತ್ತಿದೆ. ಕೆಲವೊಂದು ಮದುವೆಗಳು ಸಂಬಂಧಗಳಿಗೂ ಬೆಲೆಯಿಲ್ಲದಂತೆ ಮಾಡುತ್ತಿದೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. 16 ವರ್ಷದ ಬಾಲಕನನ್ನು ಪ್ರೀತಿಸಿದ ಶಿಕ್ಷಕಿ ಆ ಅಪ್ರಾಪ್ತನನ್ನೆ ಮದುವೆಯಾಗಿದ್ದಾಳೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಕನ ಪೋಷಕರು ಕಂಗಾಲಾಗಿದ್ದು, ಶಿಕ್ಷಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಕುರಿತು ಸೋಷಿಯಲ್ ಮಿಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ಅಂದಹಾಗೆ ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. 25 ವರ್ಷದ ಶಿಕ್ಷಕಿ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿರುವ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆಯಷ್ಟೆ ಮೀರತ್ ಮೂಲದ 16 ವರ್ಷದ ಬಾಲಕನನ್ನು ಸೋಷಿಯಲ್ ಮಿಡೀಯಾದ ಮೂಲಕ ಪರಿಚಯಿಸಿಕೊಂಡಿದ್ದಳು. ಇಬ್ಬರ ಪರಿಚಯ ಪ್ರೀತಿಯಾಗಿ ಬದಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಕಾರಿನಲ್ಲಿ ಮೀರತ್ ಹೋದ ಶಿಕ್ಷಕಿ, ಆ ಬಾಲಕನನ್ನು ಕಾರಿನಲ್ಲಿ ಗಾಜೀಯಾಬಾದ್ ಗೆ ಕರೆದುಕೊಂಡು ಹೋಗಿದ್ದಾಳೆ. ಅಲ್ಲಿಯೇ ಬಾಲಕನನ್ನು ಮೇಜರ್ ಎಂದು ನಕಲಿ ದಾಖಲೆ ಸೃಷ್ಟಿಸಿ ಮದುವೆ ನೊಂದಣಿ ಮಾಡಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಇನ್ನೂ ತಮ್ಮ ಮಗನ ಮದುವೆಯ ಸುದ್ದಿ ತಿಳಿಯುತ್ತಿದ್ದಂತೆ ಬಾಲಕನ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ಸಹ ನೀಡಿದ್ದಾರೆ. ಶಿಕ್ಷಕಿಯೊಬ್ಬಳು ತಮ್ಮ ಮಗನಿಗೆ ಹೆದರಿಸಿ ಮದುವೆಯಾಗಿದ್ದಾರೆ, ನನ್ನ ಮಗ ಅಪ್ರಾಪ್ತನಾಗಿದ್ದರೂ ಸಹ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಕೆ ಮದುವೆಯಾಗಿದ್ದಾಳೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಇನ್ನೂ ಅಪ್ರಾಪ್ತ ಬಾಲಕನ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ವೇಳೆ ಬಾಲಕನ ಒಪ್ಪಿಗೆಯೊಂದಿಗೆ ಮದುವೆ ನಡೆದಿದ್ದರೂ ಸಹ ಅದಕ್ಕೆ ಕಾನೂನಿನ ಮಾನ್ಯತೆಯಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.