Viral Video: ಸಂಪ್ರದಾಯದಂತೆ ಮುದ್ದು ಕರುವಿಗೆ ನಡೆಯಿತು ಅದ್ದೂರಿ ತೊಟ್ಟಿಲು ಶಾಸ್ತ್ರ, ವೈರಲ್ ಆದ ವಿಡಿಯೋ…..!

Viral Video – ಭಾರತ ಸಂಪ್ರದಾಯದಲ್ಲಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವ ಕಾರ್ಯಕ್ರಮ ನಡೆಯುತ್ತದೆ. ಕೆಲವೊಂದು ಕುಟುಂಬಗಳಲ್ಲಿ ಮದುವೆಗಿಂತ ಜೋರಾಗಿಯೇ ತೊಟ್ಟಿಲು ಶಾಸ್ತ್ರವನ್ನು ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಕುಟುಂಬ ತಮ್ಮ ಮನೆಯಲ್ಲಿ ಹುಟ್ಟಿದ ಕರುವಿಗೆ ತೊಟ್ಟಿಲು ಶಾಸ್ತ್ರವನ್ನು ಸಂಪ್ರದಾಯದಂತೆ ಮಾಡಿದ್ದಾರೆ. ಪುಟ್ಟ ಮಗುವಿಗೆ ಮಾಡುವಂತ ತೊಟ್ಟಿಲು ಶಾಸ್ತ್ರದಂತೆ ಮುದ್ದು ಕರುವಿಗೂ ತೊಟ್ಟಿಲು ಶಾಸ್ತ್ರ ಮಾಡಿಸಿದ್ದಾರೆ. ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಇದು ನೋಡುಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Naming ceremony for cow 0

ಇತ್ತೀಚಿಗೆ ತಮ್ಮ ಸಾಕು ಪ್ರಾಣಿಗಳಿಗೆ ಸೀಮಂತ ಶಾಸ್ತ್ರ ಮಾಡಿಸಿದಂತಹ ಸುದ್ದಿಗಳನ್ನು ಕೇಳಿರುತ್ತೇವೆ. ಅನೇಕರು ತಮ್ಮ ಸಾಕು ನಾಯಿಗಳಿಗೆ ಸೀಮಂತ ಶಾಸ್ತ್ರ ಮಾಡಿದ ಪೊಟೋಗಳು, ವಿಡಿಯೋಗಳೂ ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಅದೇ ರೀತಿಯ ಕಾರ್ಯಕ್ರಮವೊಂದು ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಕರುವಿಗೆ ಅದ್ದೂರಿ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಲಾಗಿದೆ. ಈ ಸಂಬಂಧ ವಿಡಿಯೋವನ್ನು ಆದರ್ಶ್ ಹೆಗ್ಡೆ (@adarshahgd) ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನೆರವೇರಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸುತ್ತಾ ಕರುವನ್ನು ಮಗುವಿನಂತೆ ತೊಟ್ಟಿಲಲ್ಲಿ ಕೂರಿಸಿ ತೊಟ್ಟಿಲು ಶಾಸ್ತ್ರ ಮಾಡಿಸಿ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ: Click Here

ಕಳೆದ ಜ.9 ರಂದು ಈ ವಿಡಿಯೋ ಹಂಚಿಕೊಳ್ಳಲಾದ ಈ ವಿಡಿಯೋ ಸಾವಿರಗಟ್ಟಲೇ ವೀಕ್ಷಣೆ ಕಂಡಿದೆ. ಅನೇಕರು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಓರ್ವ ನೆಟ್ಟಿಗ ಇದು ನೋಡೋಕೆ ತುಂಬಾ ಅದ್ಬುತವಾಗಿದೆ. ಗೋವುಗಳು ದೇವರಂತೆ ನೋಡಿದ ಕುಟುಂಬಕ್ಕೆ ಧನ್ಯವಾದ ಎಂದರೇ, ಮತ್ತೋರ್ವ ನೆಟ್ಟಿಗ ಗೋವುಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಕಾಣುವ ಸಂಸ್ಕೃತಿ ಇರುವುದು ನಮ್ಮ ದೇಶದಲ್ಲಿ ಮಾತ್ರ ಎಂದು ಕಾಮೆಂಟ್ ಮಾಡಿದ್ದಾರೆ. ಈ ರೀತಿಯ ಅನೇಕ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಜೊತೆಗೆ ವಿಡಿಯೋವನ್ನು ಮತ್ತಷ್ಟು ಕಡೆ ವೈರಲ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Leave a Comment

Your email address will not be published. Required fields are marked *

Scroll to Top