Viral Video – ಕಾನೂನು ಎಷ್ಟೇ ಕಠಿಣವಾದರೂ ಸಹ ಮಹಿಳೆಯರ ಮೇಲೆ ವಿವಿಧ ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ. ಕೆಲವೊಂದು ಘಟನೆಗಳು ಸಹ ಸೋಷಿಯಲ್ ಮಿಡಿಯಾದಲ್ಲಿ (Viral Video)ವೈರಲ್ ಆಗುತ್ತಿರುತ್ತದೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ಸಹ ವೈರಲ್ ಆಗುತ್ತಿದೆ. ರಿಕ್ಷಾದಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ಹಾಗೂ ಚುಡಾಯಿಸಿದ ವ್ಯಕ್ತಿಯೋರ್ವನಿಗೆ (Viral Video) ನಡುರಸ್ತೆಯಲ್ಲಿ ಆ ಯುವತಿ ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿದೆ.

ಅಂದಹಾಗೇ ಈ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಪಾದವ್ ಎಂಬ ಪೊಲೀಸ್ ಠಾಣಾ ವ್ಯಾಪ್ತಿಯ ಪೂಲ್ ಬಾಗ್ ಸ್ಕ್ವೇರ್ ನಲ್ಲಿ ಈ ಘಟನೆ ನಡೆದಿದೆ. ನ.30 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಿಕ್ಷಾದಲ್ಲಿ ಪುರುಷನೋರ್ವ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ಆತನನ್ನು ಹೊರಬಂದು ವ್ಯಕ್ತಿಯನ್ನು ಹೊರೆಗೆ ಎಳೆದು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿದ್ದಾಳೆ. ಈ ಘಟನೆಯನ್ನು ಅಲ್ಲಿದ್ದ ಸ್ಥಳೀಯರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸೋಷಿಯಲ್ ಮಿಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಇನ್ನೂ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಆಟೋ ರಿಕ್ಷಾದಲ್ಲಿ ತನಗೆ ಕಿರುಕುಳ ನೀಡಿದಂತಹ ವ್ಯಕ್ತಿಯನ್ನು ಹೊರಗೆ ಎಳೆದು ಚಪ್ಪಲಿಯಿಂದ ಸಾರ್ವಜನಿಕವಾಗಿಯೇ ಹೊಡೆದಿದ್ದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋ ಅಲ್ಲಿದ್ದವರು ತಮ್ಮ ಮೊಬೈಲ್ ಗಳಲ್ಲಿ ವಿಡಿಯೋ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ಮತಷ್ಟು ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಯುವತಿಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಈ ಕುರಿತು ಯುವತಿ ದೂರು ನೀಡಿಲ್ಲ. ಒಂದು ವೇಳೆ ದೂರು ನೀಡಿದರೇ ಆ ವ್ಯಕ್ತಿಯ ವಿರುದ್ದ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.