Viral Video – ಸರಸ್ವತಿ ಪೂಜೆಯನ್ನು ಪ್ರತಿವರ್ಷ ಭಕ್ತಿ-ಭಾವದಿಂದ ಆಚರಿಸುವ ಸಂಪ್ರದಾಯ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಇದೆ. ಆದರೆ, ಇತ್ತೀಚಿಗೆ ಒಂದು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸರಸ್ವತಿ ಪೂಜೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬರು ಮಾಡಿದ ಅಶ್ಲೀಲ ನೃತ್ಯ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ. ಈ ಘಟನೆ ನೇಪಾಳದ ಕಾಲೇಜೊಂದರಲ್ಲಿ ನಡೆದಿದ್ದು, ಪೂಜೆಯ ವೇಳೆ ಸ್ಟೇಜ್ ಮೇಲೆ ನಡೆದ ಈ ನೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಜೊತೆಗೆ ನೆಟ್ಟಿಗರು ಈ ವಿದ್ಯಾರ್ಥಿನಿಯ ವರ್ತನೆಯ ಸಂಬಂಧ ಆಕ್ರೋಷ ಸಹ ಹೊರಹಾಕುತ್ತಿದ್ದಾರೆ.

ಇಂದಿಗೂ ಸಹ ಅನೇಕ ಶಾಲಾ ಕಾಲೇಜುಗಳಲ್ಲಿ ಸರಸ್ಪತಿ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಗುತ್ತದೆ. ಅದೇ ರೀತಿ ನೇಪಾಳದ ಇಂಜನಿಯರಿಂಗ್ ಕಾಲೇಜೊಂದರಲ್ಲಿ ಸರಸ್ಪತಿ ಪೂಜೆಯನ್ನು ಏರ್ಪಡಿಸಲಾಗಿತ್ತು ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಅಶ್ಲೀಲ ಡ್ಯಾನ್ಸ್ ಮಾಡಿದ್ದಾಳೆ. ಆಕೆಯ ಈ ವರ್ತನೆಯ ವಿರುದ್ದ ನೆಟ್ಟಿಗರು ಆಕ್ರೋಷ ಹೊರಹಾಕಿದ್ದಾಳೆ. ಈ ವಿಡಿಯೋವನ್ನು @24rapidnews ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿ ವಿದ್ಯಾರ್ಥಿನಿ ವೇದಿಕೆಯ ಮೇಲೆ ಅಶ್ಲೀಲ ನೃತ್ಯ ಪ್ರದರ್ಶನ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಸಾವಿರಾರು ವೀಕ್ಷಣೆ ಕಂಡಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಈ ವಿಡಿಯೋ ವೈರಲ್ ಆಗುತ್ತಿದ್ದು, ಸಾವಿರಾರು ವೀಕ್ಷಣೆಗಳು ಹಾಗೂ ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ. ಕೆಲವು ಬಳಕೆದಾರರು, “ಇಂತಹ ನೃತ್ಯಕ್ಕೆ ಅವಕಾಶ ನೀಡಿದವರು ಯಾರು?” ಎಂದು ಪ್ರಶ್ನಿಸಿದರೆ, ಇನ್ನು ಕೆಲವರು “ಇದರಲ್ಲಿ ತಪ್ಪೇನು?” ಎಂದು ಪ್ರತಿಭಟಿಸಿದ್ದಾರೆ. ಮತ್ತೆ ಕೆಲವರು ಈ ಘಟನೆಯನ್ನು “ಸಂಸ್ಕೃತಿ ಮತ್ತು ಪವಿತ್ರ ಸಂದರ್ಭಗಳಿಗೆ ಅವಮಾನಕರ” ಎಂದು ಟೀಕಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಕುರಿತು ಸ್ಥಳೀಯವಾಗಿ ವಿವಾದ ಮಾತುಗಳು ಹಬ್ಬಿವೆ. ಈ ಸಂಬಂಧ ಸಂಬಂಧಪಟ್ಟ ಕಾಲೇಜಿನವರು ವಿದ್ಯಾರ್ಥಿನಿಯ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅನೇಕರು ಒತ್ತಾಯಿಸಿದ್ದಾರೆ.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
