Viral Video – ಸಮಾಜದಲ್ಲಿ ಅಲ್ಲಲ್ಲಿ ನಡೆಯುವಂತಹ ಕೆಲವೊಂದು ಘಟನೆಗಳ ಕಾರಣದಿಂದ ಶಿಕ್ಷಕ ಎಂಬ ಪದಕ್ಕೆ ಕಳಂಕ ಬರುತ್ತಿದೆ. ವಿದ್ಯಾರ್ಥಿಗಳನ್ನು ತಿದ್ದಿ ತೀಡುವ ಕೆಲಸ ಮಾಡಬೇಕಾದ ಶಿಕ್ಷಕರು ಮಾಡುವ ಅಪಚಾರಗಳಿಂದ ಶಿಕ್ಷಕ ವೃತ್ತಿಗೂ ಕಳಂಕ ಬರುತ್ತಿದೆ. ಅದೇ ರೀತಿಯ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಹೋದ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು (Viral Video) ಆ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಅಂದಹಾಗೆ ಈ ಘಟನೆ ಹಿಮಾಚಲ ಪ್ರದೇಶದ ಹಮೀರ್ ಪುರ ಎಂಬಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಆರೋಪದಡಿ ಶಿಕ್ಷಕನಿಗೆ ಸರಿಯಾಗಿಯೇ ಗೂಸ ಬಿದಿದ್ದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ಶಿಕ್ಷಕನಿಗೆ ಚಪ್ಪಲಿಯಲ್ಲಿ ಸರಿಯಾಗಿ ಥಳಿಸಿದ್ದಾರೆ. (Viral Video) ಆರೋಪಿ ಶಿಕ್ಷಕ ವಿದ್ಯಾರ್ಥಿನಿಗೆ ಪದೇ ಪದೇ ಅಶ್ಲೀಲ ಮಸೇಜ್ ಕಳುಹಿಸುತ್ತಿದ್ದ. ಆಕೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳಂತೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಮನೆಯವರು ಎಲ್ಲರ ಮುಂದೆಯೇ ಶಿಕ್ಷಕನಿಗೆ ಸರಿಯಾಗಿಯೇ ಥಳಿಸಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಇನ್ನೂ ಈ ಸಂಬಂಧ ವಿಡಿಯೋ ಒಂದನ್ನು @News1IndiaTweet ಹೆಸರಿನ ಎಕ್ಸ್ (ಟ್ವಿಟರ್)ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ (Viral Video) ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ಶಿಕ್ಷಕನಿಗೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಶಾಲೆಯ ಹೊರಗಡೆ ವಿದ್ಯಾರ್ಥಿಗಳ ಮುಂದೆಯೇ ಚಪ್ಪಲಿ ಸೇವೆ ಸಹ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಮಕ್ಕಳಿಗೆ ಶಿಕ್ಷಣವನ್ನು ನೀಡಿ ಅವರ ಜೀವನ ರೂಪಿಸಬೇಕಾದ ಶಿಕ್ಷಕನ ಈ ವರ್ತನೆಯ (Viral Video) ವಿರುದ್ದ ನೆಟ್ಟಿಗರು ಆಕ್ರೋಷ ಹೊರಹಾಕುತ್ತಿದ್ದು, ಶಿಕ್ಷಕನಿಗೆ ಕಾನೂನಿನಂತೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.