Viral – ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪತಿಯೊಬ್ಬ ₹80 ಸಾವಿರ ಸಾಲ ಮರುಪಾವತಿಸದ ಕಾರಣ, ಅವರ 29 ವರ್ಷದ ಪತ್ನಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿ, ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Viral – ಏನಿದು ಘಟನೆ?
ಕೆಲ ವರ್ಷಗಳ ಹಿಂದೆ ತಿಮ್ಮರಾಯಪ್ಪ ಎಂಬಾತ ಗ್ರಾಮಸ್ಥರಿಂದ ₹80,000 ಸಾಲ ಮಾಡಿದ್ದನು. ಆದರೆ, ಆತ ಈವರೆಗೂ ಅದನ್ನು ಮರುಪಾವತಿಸಿಲ್ಲ. ಅಷ್ಟೇ ಅಲ್ಲದೆ, ಕಳೆದ ಕೆಲವು ತಿಂಗಳಿಂದ ಆತ ಊರಿನಲ್ಲಿ ಕಾಣಿಸುತ್ತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿದವರು ಆತನ ಪತ್ನಿ ಸಿರಿಷಾ ಅವರನ್ನು ವಿಚಾರಿಸಿದ್ದಾರೆ. ಆಗ ಸಿರಿಷಾ, “ನನ್ನಿಂದ ಸಾಲ ತೀರಿಸಲು ಸಾಧ್ಯವಿಲ್ಲ. ನನ್ನ ಪತಿ ನನ್ನನ್ನು ಬಿಟ್ಟು ಹೋಗಿದ್ದಾರೆ. ಕಳೆದ 6 ತಿಂಗಳಿಂದ ಅವರು ನನ್ನ ಸಂಪರ್ಕದಲ್ಲಿ ಇಲ್ಲ,” ಎಂದು ಹೇಳಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಇದರಿಂದ ಆಕ್ರೋಶಗೊಂಡ ಸಾಲ ನೀಡಿದವರು, ಸಿರಿಷಾ ಅವರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಾಲ ನೀಡಿದ ಕುಟುಂಬದ ಪ್ರಕಾರ, “ಸಿರಿಷಾ ಊರು ಬಿಟ್ಟು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿದ್ದರು, ಅಲ್ಲಿ ಅವರ ಪತಿ ಇದ್ದಾರೆ. ಆ ಕಾರಣದಿಂದಲೇ ನಾವು ಅವರನ್ನು ತಡೆದಿದ್ದೇವೆ,” ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. Read this also : ಹೆಂಡತಿಯನ್ನು ಬಾಲ್ಕನಿಯಲ್ಲಿ ನೇತುಹಾಕಿದ ಪತಿ – ಭಯಾನಕ ದೃಶ್ಯ, ರಿಷಿಕೇಶ್ ನಲ್ಲಿ ನಡೆದ ಘಟನೆ…!

Viral – ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಖಂಡನೆ
ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಈ ಘಟನೆಗೆ ಸಂಬಂಧಿಸಿದಂತೆ ಮುನಿಕನ್ನಪ್ಪ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
