Viral – ಮಧ್ಯಪ್ರದೇಶದ ಜಬಲ್‌ಪುರದ ದೇವಸ್ಥಾನವೊಂದರಲ್ಲಿ ಯುವಕನೊಬ್ಬ ಭಗವಾನ್ ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ (Viral) ಆಗುತ್ತಿದೆ. ಶಿವನನ್ನು ರೌದ್ರ ರೂಪದಲ್ಲಿ ಪೂಜಿಸುವ ಕಾಲಬೈರವೇಶ್ವರನ ಪ್ರತಿಮೆ ಮುಂದೆ ಸಿಗರೇಟ್ ಹೊತ್ತಿಸಿ, ದೇವರ ಬಾಯಿಗೆ ಇಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಅನೇಕರು ಆತನ ವಿರುದ್ದ ಕಾನೂನಿನಂತೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದು, ಆರೋಪಿಯ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಮಧ್ಯಪ್ರದೇಶದ ಜಬಲ್ ಪುರದಲ್ಲಿರುವ ಕಾಲಭೈರವನ ಪ್ರತಿಮೆ ಮುಂದೆ ಸಿಗರೇಟ್ ಹೊತ್ತಿಸಿದ್ದಾನೆ. ಅದನ್ನು ದೇವರ ಮೂರ್ತಿಯ ಬಾಯಿಯ ಬಳಿ ಇಟ್ಟು ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವಕ ಕಾಲಭೈರವನ ಬಾಯಿಯ ಬಳಿ ಸಿಗರೇಟ್ ಇಡುವುದನ್ನು ಕಾಣಬಹುದು. ಈ ವಿಡಿಯೋ ವೈರಲ್ ಆಗುತ್ತಿರುವಂತೆ, ನೆಟ್ಟಿಗರು ಗರಂ ಆಗಿದ್ದಾರೆ. ಈ ವಿಡಿಯೋ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಈ ಕುರಿತು ಜಬಲ್ ಪುರ ಪೊಲೀಸರು ತನಿಖೆ ಆರಂಭಿಸಿದ್ದು, ಈ ಪ್ರಕರಣವನ್ನು ಬೇದಿಸಲು ಪೊಲೀಸರು ವಿಶೇಷ ತಂಡವನ್ನು ಸಹ ರಚಿಸಿದ್ದಾರೆ ಎನ್ನಲಾಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಇನ್ನೂ 36 ಸೆಕೆಂಡುಗಳ ಈ ವಿಡಿಯೋದಲ್ಲಿ, ಭಕ್ತರು ದೇವರಿಗೆ ಸಿಗರೇಟ್ ಅರ್ಪಿಸಿದರೆ, ಅವರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಯುವಕ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಅರ್ಚಕರು ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಿಚಿತ ಯುವಕನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಕೇಸ್ ದಾಖಲಿಸಲಾಗಿದ್ದು ಸಂಪೂರ್ಣ ತನಿಖೆ ಆರಂಭಿಸಲಾಗಿದೆ ಎಂದು ಜಬಲ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆನಂದ ಕಲಾದಗಿ ತಿಳಿಸಿದ್ದಾರೆ ಎನ್ನಲಾಗಿದೆ.