ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯ ತಾಲೂಕುಗಳಲ್ಲಿ ಅಂಗನವಾಡಿಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು (WCD Recruitment) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಚಿಕ್ಕಬಳ್ಳಾಪುರ ವಿಭಾಗ ಈ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅ.19 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡಲು ಬಯಸುವಂತಹವರಿಗೆ ಇದು ಗುಡ್ ನ್ಯೂಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಚಿಕ್ಕಬಳ್ಳಾಪುರ (WCD Recruitment) ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 285 ಹುದ್ದೆಗಳಿದ್ದು, ಸರ್ಕಾರದ ಮಾರ್ಗಸೂಚಿಯಂತೆ ವೇತನ ನಿಗಧಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ, ಮಿನಿ ಅಂಗನವಾಡಿ ಕಾರ್ಯಕರ್ತೆ/ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆಯನ್ನು ನಿಗಧಿಪಡಿಸಲಾಗಿದೆ. ವಯೋಮಿತಿ ವಿಚಾರಕ್ಕೆ ಬಂದರೇ ಕನಿಷ್ಟ 19 ಹಾಗೂ ಗರಿಷ್ಟ 35 ವರ್ಷ ವಯಸ್ಸಾಗಿರಬೇಕು. ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಡೆದ ಅಂಕಗಳ ಮೆರಿಟ್ ಪಟ್ಟಿಯನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
WCD ಚಿಕ್ಕಬಳ್ಳಾಪುರ ನೇಮಕಾತಿ 2024 ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ:
- WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ, ನೀವು ಈ ಹುದ್ದೆಗೆ ಅರ್ಹರೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
- ಬಳಿಕ ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವುದು.
- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹಾಗೂ ಅಧಿಸೂಚನೆಯಲ್ಲಿ ತಿಳಿಸಿದ ಅಗತ್ಯ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳುವುದು.
- WCD ಚಿಕ್ಕಬಳ್ಳಾಪುರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ: https://karnemakaone.kar.nic.in/abcd/home.aspx
- WCD ಚಿಕ್ಕಬಳ್ಳಾಪುರ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಬೇಕು.
- WCD ಚಿಕ್ಕಬಳ್ಳಾಪುರ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಬಳಿಕ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿಟ್ಟುಕೊಳ್ಳಿ.