Weather Update – ದೇಶದ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ, ಬಹುತೇಕ ಪ್ರದೇಶಗಳಲ್ಲಿ ವಿಪರೀತ ಚಳಿ ಕಂಡು ಬಂದರೆ ದಕ್ಷಿಣ ಭಾರತ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಿದೆ. ಕರ್ನಾಟಕದಲ್ಲೂ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಶನಿವಾರ ತಾಪಮಾನದಲ್ಲಿ ಭಾರಿ ಇಳಿಕೆಯಾಗಿತ್ತು. ತೀವ್ರತರ ಚಳಿ, ಮಂಜಿನ ವಾತವರಣ ಕಂಡುಬಂದಿತ್ತು. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಚಳಿ ಆವರಿಸಿದೆ. ಈ ನಡುವೆ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತ ಕಾರಣದಿಂದ ಈ ಮಳೆಯಾಗುತ್ತಿದೆ. ಈ ಚಂಡಮಾರುತ ದಕ್ಷಿಣ ಭಾರತದ ರಾಜ್ಯಗಳ ಮೇಲೂ ಪರಿಣಾಮ ಬೀರಲಿದ್ದು, ಇದರಿಂದ ಇಂದು (ಭಾನುವಾರ 19)ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳ್ಳಗ್ಗೆ ತುಂತುರು ಮಳೆಯಾಗಿದೆ. ಸೋಮವಾರವು ಸಹ ಮುಂದುವರಿಯಲಿದೆಯಂತೆ. ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಹಲವು ದಿವಸಗಳ ಕಾಲ ಚಳಿ ಆವರಿಸಲಿದೆ ಎಂದು ಹವಾಮಾನ ತಜ್ಞರು ಸೂಚನೆ ನೀಡಿದ್ದಾರೆ.
ಇನ್ನೂ ಕರ್ನಾಟಕದ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ ಎನ್ನಲಾಗಿದೆ. ಇನ್ನೂ ಕರ್ನಾಟಕದ ರಾಜ್ಯದ ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಕೆಲವು ಪ್ರದೇಶಗಳಲ್ಲಿ ಜೋರು ಮಳೆಯ ಲಕ್ಷಣ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಮುಂದಿನ 48 ಗಂಟೆಗಳಲ್ಲಿ ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿಯ ಬಳಿ ಹೊಸದಾಗಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಉತ್ತರ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಪ್ರಕಾರ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಪಶ್ಚಿಮ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶದ ಜೊತೆಗೆ ಬಿಹಾರದ ಕೆಲವು ಪ್ರದೇಶಗಳಲ್ಲಿ ದಟ್ಟವಾದ ಮತ್ತು ದಟ್ಟವಾದ ಮಂಜು ದಾಖಲಾಗಿದೆ ಎಂದು IMD ಸೂಚನೆ ನೀಡಿದೆ.
ಇನ್ನೂ ರಾಜಸ್ತಾನ ಮತ್ತು ಗುಜರಾತ್ ಗಡಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು IMD ಸೂಚನೆ ನೀಡಿದೆ. ಈ ಕಾರಣದಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಜನವರಿ 21ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜನವರಿ 21 ರಿಂದ 23 ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.