ಲೋಕಸಭಾ ಚುನಾವಣೆಯಲ್ಲಿ 2024ರ ನಿಮಿತ್ತ ಕಾಂಗ್ರೇಸ್ ಸರ್ಕಾರ ಕೆಲವೊಂದು ಗ್ಯಾರಂಟಿಗಳನ್ನು ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದರು. ಇದೀಗ ಚುನಾವಣೆ ಫಲಿತಾಂಶ ಹೊರಬಂದಿದ್ದು, ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ಫಲಿತಾಂಶ ಬಂದಿದೆ. ಕೆಲವೊಂದು ಕಡೆ ಬಿಜೆಪಿಗಿಂತ ಒಳ್ಳೆಯ ಸಾಧನೆ ಮಾಡಿದೆ. ಉತ್ತರ ಪ್ರದೇಶದಲ್ಲಂತೂ ಎನ್.ಡಿ.ಎ ಪಕ್ಷಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಇಂಡಿ ಒಕ್ಕೂಟ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಆದರೆ ಉತ್ತರ ಪ್ರದೇಶದ ಮಹಿಳೆಯರು ಕಾಂಗ್ರೇಸ್ ಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಇದೀಗ ಗ್ಯಾರಂಟಿ ಕಾರ್ಡ್‌ಗಾಗಿ ಕಾಂಗ್ರೇಸ್ ಕಚೇರಿಯ ಮುಂಭಾಗ ಪ್ರತಿಭಟನೆ ಸಹ ನಡೆಸಿದೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದಲ್ಲಿ ಈ ಬಾರಿ ಸಮಾಜವಾದಿ ಪಾರ್ಟಿ 37 ಸ್ಥಾನಗಳಲ್ಲಿ ಜಯ ಗಳಿಸಿದೆ. ಬಿಜೆಪಿ 33 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೇಸ್ 6 ಸ್ಥಾನಗಳಲ್ಲಿ ಜಯಗಳಿಸಿದೆ. ಇಂಡಿ ಮೈತ್ರಿ ಕೂಟ ಉತ್ತರ ಪ್ರದೇಶದಲ್ಲಿ 43 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಕ್ಷಕ್ಕೆ ಟಕ್ಕರ್ ಕೊಟ್ಟಿದ್ದಾರೆ. ಇನ್ನೂ ಚುನಾವಣೆಯ ಪ್ರಚಾರದ ಪ್ರಣಾಳಿಕೆಯಲ್ಲಿ 1 ಲಕ್ಷ ವಾರ್ಷಿಕ ನೀಡುವುದಾಗಿ ಭರವಸೆ ನೀಡಿತ್ತು. ಇದೀಗ ಉತ್ತರ ಪ್ರದೇಶದ ಮಹಿಳೆಯರು ಒಂದು ಲಕ್ಷದ ಗ್ಯಾರಂಟಿ ಕಾರ್ಡ್‌ಗಳಿಗಾಗಿ ಕಾಂಗ್ರೇಸ್ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಲಕ್ನೋದಲ್ಲಿ ಹಲವಾರು ಮಹಿಳೆಯರು ಕಾಂಗ್ರೇಸ್ ಕಚೇರಿಯ ಮುಂದೆ ಸರತಿ ಸಾಲಿನಲ್ಲಿ ನಿಂತು, ಕಾಂಗ್ರೇಸ್ ಪಕ್ಷ ಪ್ರಚಾರದ ವೇಳೆ ಭರವಸೆ ನೀಡಿದ್ದ ಗ್ಯಾರಂಟಿ ಕಾರ್ಡ್‌ಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ.
https://x.com/erbmjha/status/1798283427843822065
ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಚಾರದ ಸಮಯದಲ್ಲಿ ದೇಶದ ಪ್ರತಿ ಬಡ ಕುಟುಂಬದ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದರು. ಜೊತೆಗೆ ಹಲವು ಮನೆಗಳಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡಿದ್ದರು. ಕಾಂಗ್ರೇಸ್ ಕಚೇರಿಯ ಹೊರಗೆ ಬಿಸಿಲಿನ ಬೇಗೆಯನ್ನೂ ಲೆಕ್ಕಿಸದೇ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಸಾಲುಗಟ್ಟಿ ನಿಂತಿದ್ದರು. ಇನ್ನೂ ಸುಮಾರು 8 ಕೋಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೇಸ್ ಘರ್ ಘರ್ ಗ್ಯಾರಂಟಿ ಎಂಬ ಕಾರ್ಯಕ್ರಮ ಪ್ರಾರಂಭಿಸಿತು. ಈ ಗ್ಯಾರಂಟಿಗಳಲ್ಲಿ ಮಹಾಲಕ್ಷ್ಮೀ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರ ಖಾತೆಗೆ ಮಾಹೆಯಾನ 8500 ರೂಪಾಯಿಗಳನ್ನು ನೇರವಾಗಿ ಜಮೆ ಮಾಡಲಾಗುವ ಭರವಸೆ ನೀಡಿತ್ತು.