ಬಾಗೇಪಲ್ಲಿ: ಹೈನುಗಾರಿಕೆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ ಹೈನೋದ್ಯಮದ ಹರಿಕಾರ ಎಂ.ವಿ.ಕೃಷ್ಣಪ್ಪ ರವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕೋಚಿಮುಲ್ ಉಪವ್ಯವಸ್ಥಾಪಕ ಡಾ.ಗುರಪ್ಪ ತಿಳಿಸಿದರು.
ವಿಶ್ವ ಹಾಲು ದಿನಾಚರಣೆ ಹಾಗೂ ಹೈನೋದ್ಯಮದ ಹರಿಕಾರ ಎಂ.ವಿಕೃಷ್ಣಪ್ಪ ರವರ ಹುಟ್ಟು ಹಬ್ಬದ ಅಂಗವಾಗಿ ಕೋಚಿಮುಲ್ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಾಲು ವಿತರಿಸುವ ಮೂಲಕ ಎಂ.ವಿ ಕೃಷ್ಣಪ್ಪ ರವರ ಜನ್ಮದಿನಾಚರಣೆ ಆಚರಿಸಿ ಮಾತನಾಡಿ, ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳ ಬಗ್ಗೆ ಜನಜಾಗೃತಿ ಮೂಡಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದ ಅವರು ಹಾಲಿನಲ್ಲಿ ಮನುಷ್ಯನ ದೇಹಕ್ಕೆ ಅಗತ್ಯವಿರುವ ಜೀವಸತ್ವಗಳು, ವಿಟಮಿನ್, ಪ್ರೋಟೀನ್‍ಗಳಿವೆ ಅಲ್ಲದೆ ಹಾಲಿನಲ್ಲಿ ವಿಟಮಿನ್ ಡಿ ಹೆಚ್ಚಾಗಿದೆ ಎಂದ ಅವರು ಕೋಚಿಮುಲ್ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಾಲು ವಿತರಿಸುವ ಮೂಲಕ ವಿಶ್ವ ಹಾಲು ದಿನಾಚರಣೆ ಹಾಗೂ ಹೈನೋದ್ಯಮದ ಹರಿಕಾರ ಎಂ.ವಿ.ಕೃಷ್ಣಪ್ಪ ರವರ ಜನ್ಮದಿನಾಚರಣೆ ಆಚರಿಸುತ್ತಿರುವುದಾಗಿ ತಿಳಿಸಿದರು.
ನಂದಿನಿ ಹಾಲು ಹಾಗೂ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬಳಸಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹಾಲು ಉತ್ಪದಾಕರು ಹಾಗೂ ಸಹಕಾರ ಸಂಘಗಳ ಉಳಿವಿಗಾಗಿ ಪ್ರತಿಯೊಬ್ಬರು ಕೈಕೋಡಿಸಬೇಕೆಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಪಶುವೈದ್ಯ ಇಲಾಖೆ ಉಪ ವ್ಯವಸ್ಥಾಪಕ ಗೌತಮ್, ಡಾ.ಕೃಷ್ಣಮೂರ್ತಿ, ವಿಸ್ತರಣಾಧಿಕಾರಿಗಳಾದ ಜಿ.ಎಂ.ನಾಗರಾಜ್, ಅನಂತಕುಮಾರ್, ಕೃಷಿ ಅಧಿಕಾರಿ ಮಮತಾ ಮತ್ತಿತರರು ಇದ್ದರು.