Yatnal – ರಾಜ್ಯ ರಾಜಕಾರಣದಲ್ಲಿ ಇತ್ತೀಚಿಗೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬ ಮಾತುಗಳು ಆಗಾಗ ಕೇಳಿಬರುತ್ತಲೇ ಇರುತ್ತದೆ. ನಿನ್ನೆಯಷ್ಟೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ಡ ಘಟನೆ ರಾಜ್ಯದಾದ್ಯಂತ ಭಾರಿ ಆಕ್ರೋಷಕ್ಕೆ ಕಾರಣವಾಗಿದೆ. ಇನ್ನೂ ಈ ಘಟನೆಯ ಕುರಿತು ವಿಜಯಪುರ ಶಾಸಕ ಯತ್ನಾಳ್ ಸರ್ಕಾರದ ವಿರುದ್ದ ಆಕ್ರೋಷ ಹೊರಹಾಕಿದ್ದಾರೆ. ಇದೇ ಸಮಯದಲ್ಲಿ ರಾಜ್ಯ ಸರ್ಕಾರ ಲಕ್ಷ್ಮೀ ಹೆಬ್ಬಾಳ್ಕರ್ ರಿಂದಲೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ಡ ಘಟನೆಯ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರದಲ್ಲಿ ಮಾತನಾಡಿದ್ದಾರೆ. ಪಶು ಆಸ್ಪತ್ರೆ ಮಾಡಬೇಕು ಎಂದು ದಾನಿಗಳು ಜಾಗ ನೀಡಿದ್ದರು. ಸಚಿವ ಜಮೀರ್ ಅಹ್ಮದ್ ಅದನ್ನು ವಕ್ಫ್ ಮಾಡಿದ್ದರು. ಹೈಕೋರ್ಟ್ ನಲ್ಲಿ ಅದಕ್ಕೆ ತಡೆಯಾಜ್ಞೆ ಸಿಕ್ಕಿದೆ. ಈ ಕಾರಣದಿಂದ ಮತಾಂಧರು ರೊಚ್ಚಿಗೆದ್ದು ಈ ಪಾಪದ ಕೃತ್ಯವೆಸಗಿದ್ದಾರೆ. ಮುಸ್ಲೀಂರಲ್ಲಿ ಅಸಹಿಷ್ಣುತೆ ಇದೆ ಎಂಬುದು ಸ್ಪಷ್ಟವಾಗುತ್ತದೆ. ರಾಜ್ಯ ಕಾಂಗ್ರೇಸ್ ಸರ್ಕಾರ ಮುಸ್ಲೀಂರನ್ನು ತುಷ್ಠಿಕರಣ ಮಾಡುತ್ತಿದೆ. ಈ ರಾಜ್ಯದಲ್ಲಿ ಗೋವುಗಳೂ ಸಹ ಸುರಕ್ಷಿತವಾಗಿರಲಿಲ್ಲ ಈಗ ಗೃಹ ಮಂತ್ರಿಗಳು ಏನು ಮಾಡ್ತಾರೆ ಎಂಬುದನ್ನು ನೋಡೋಣ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ರವರು ಶತ್ರುಗಳ ಸಂಹಾರಕ್ಕಾಗಿ ಪೂಜೆ ಮಾಡಿಸುತ್ತಿದ್ದಾರೆ. ಆದರೆ ಹಿಂದೂಗಳ ಮೇಲೆ ದಬ್ಬಾಳಿಕೆ ಆದ್ರೆ ಮಾತ್ರ ಏನೂ ಮಾತನಾಡೊಲ್ಲ. ಡಿ.ಕೆ.ಶಿವಕುಮಾರ್ ಗೆ ಕೊಳಕು ಬುದ್ದಿಯಿಂದ ಅವರು ಏನೂ ಆಗೊಲ್ಲ. ರಾಜ್ಯದಲ್ಲಿ ಹಿಂದೂ ಮಹಿಳೆಯರ ಮೇಲೆ ದಬ್ಬಾಳಿಕೆಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏಕೆ ಮಾತನಾಡುತ್ತಿಲ್ಲ. ಪಂಚಮಸಾಲಿ ಮಗಳು ಅಂದಿದ್ರು, ಈಗ ವೀರಶೈವ ಸಮಾಜದ ಮಹಿಳೆಯ ಮೇಲೆ ದಬ್ಬಾಳಿಕೆ ನಡೆದಾಗ ಅವರು ಏಕೆ ಮಾತನಾಡುತ್ತಿಲ್ಲ. ಹೆಬ್ಬಾಳ್ಕರ್ ಮಾಡುತ್ತಿರುವುದು ಸರಿಯಲ್ಲ. ತಮಗೆ ಡಿ.ಕೆ.ಶಿವಕುಮಾರ್ ಬೆಂಬಲಯಿದೆ ಎಂದು ಈ ರೀತಿಯಾಗಿ ಮಾಡುವುದು ಸರಿಯಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ರವರಿಂದಲೇ ಈ ಸರ್ಕಾರ ಪತನವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನೂ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ಡ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು. ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿದ್ದಾರೆ. ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ. ಹಸುವಿನ ಕೆಚ್ಚಲು ಕೊಯ್ದಿದ್ದು ತಪ್ಪು, ಕಮಿಷನರ್ ಅವರಿಗೆ ನಾನು ಕಳಿಸಿದ್ದೇನೆ, ನನಗೆ ಈಗಷ್ಟೆ ಮಾಹಿತಿ ಬಂತು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ . ಹಿಂದೂಪರ ಸಂಘಟನೆಗಳು ರಾಜಕೀಯಕ್ಕಾಗಿ ಈ ವಿಚಾರದಲ್ಲಿ ಪ್ರತಿಭಟನೆ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನೂ ಸಚಿವ ಜಮೀರ್ ಅಹ್ಮದ್ ಈ ಪ್ರಕರಣದ ಕುರಿತು ಮಾತನಾಡಿದ್ದು, ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ರೀತಿಯಲ್ಲಿ ಮಾಡಬಾರದು. ನಾನು ಹಾಗೂ ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿದ್ವಿ. ವಿಚಾರ ಗೊತ್ತಾದ ತಕ್ಷಣ ಮುಖ್ಯಮಂತ್ರಿಗಳು ಕಮೀಷನರ್‌ಗೆ ಕರೆ ಮಾಡಿ ಅದು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಸೂಚನೆ ನೀಡಿದರು. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವನ ಮೇಲೆ ಕಠಿಣ ಕ್ರಮ ಆಗಬೇಕು. ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದ್ದೇನೆ ಎಂದು ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಮಯದಲ್ಲಿ ಭರವಸೆ ನೀಡಿದರು.