ಗುಡಿಬಂಡೆ: ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ನಾವು ಉತ್ತಮ ಆರೋಗ್ಯ ಪಡೆದುಕೊಂಡು ಜೀವನ ನಡೆಸಬಹುದು. ಜೊತೆಗೆ ಮಾನಸಿಕ ಒತ್ತಡದಿಂದ ದೂರವಿರಲು ಸಹ ಯೋಗಾಭ್ಯಾಸ ಅತ್ಯಂತ ಸಹಕಾರಿ ಎಂದು ಜೆ.ಎಂ.ಎಫ್.ಸಿ ನ್ಯಾಯಾಧೀಶ ಕೆ.ಎಂ.ಹರೀಶ್ ತಿಳಿಸಿದರು.
ಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ನಿಮಿತ್ತ ಯೋಗಾಸನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾನಸಿಕ ಒತ್ತಡದಿಂದ ದೂರವಿರಲು ಯೋಗಾಭ್ಯಸ ಸಹಕಾರಿ, ಪ್ರತಿಯೊಬ್ಬರು ತಮ್ಮ ಆರೋಗ್ಯ ಜೀವನವನ್ನು ಸುಸ್ಥಿಯಲ್ಲಿ ಕಾಪಡಿಕೊಳ್ಳಲು ಯೋಗ ಗುರುಗಳ ಮಾರ್ಗದರ್ಶನದಲ್ಲಿ ಯೋಗ ಶಿಕ್ಷಣಕ್ಕೆ ಮಹತ್ವ ನೀಡಿ ಮಾನಸಿಕ ಮತ್ತು ದೈಹಿಕ ಆರೋಗ ವೃದ್ದಿಗೆ ಮುಂದಾಗಬೇಕು. ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜೊತೆಗೆ ಯೋಗ ಶಿಕ್ಷಣ ಕೂಡ ಮುಖ್ಯವಾಗಿದ್ದು, ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಹ ನೀಡಬೇಕೆಂದರು.
ಇನ್ನೂ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕಿನ ತಿರುಮಣಿ ಸರ್ಕಾರಿ ಪ್ರೌಢಶಾಲೆಯಲ್ಲೂ ಸಹ ಆಚರಿಸಲಾಯಿತು, ಈ ವೇಳೆ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಮಂಜುನಾಥ್, ನಮ್ಮ ದೇಶ ಯೋಗ ಸಂಪತ್ತಿನ ಸಿರಿವಂತಿಕೆಯನ್ನು ವಿಶ್ವದಲ್ಲೆ ಹೊಂದಿದ್ದು, ಸಿದ್ದರು, ಯೋಗಿಗಳು, ಋಷಿ ಮುನಿಗಳು ಯೋಗಾಭ್ಯಸದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಪತಾಂಜಲಿ ಮುನಿಗಳು ಇದರ ಮಹತ್ವವನ್ನು ಸಾರಿ ಇಂತಹ ಯೋಗ ವಿಶ್ವ ಶಾಂತಿ ಮತ್ತು ಉತ್ತಮ ಆರೋಗ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು.
ಈ ವೇಳೆ ಶಿಕ್ಷಣ ಇಲಾಖೆಯ ಚಂದ್ರಶೇಖರ್, ಮುರಳಿ, ಅಂಜಿನಪ್ಪ, ಮನೋಹರ್, ಕಂದಾಯ ಇಲಾಖೆಯ ಸುರೇಶ್ ನಾಯ್ಕ್, ವಿ.ಎ.ಸುದರ್ಶನ್ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.